ಮಹಿಳೆಯಲ್ಲಿ ಅಗಾಧ ಶಕ್ತಿ, ಪ್ರತಿಭೆಯಿದೆ
ನರೇಗಲ್ಲ: ಮಹಿಳೆಯರಲ್ಲಿ ಪ್ರತಿಭೆಯಿದೆ. ಅದನ್ನು ಹೊರಹಾಕಲು ಅಕೆಗೆ ಸಮರ್ಥ ವೇದಿಕೆಯ ಅವಶ್ಯಕತೆಯಿದೆ ಎಂದು ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದ ಶಿವಬಸವ ಶ್ರೀಗಳು ಹೇಳಿದರು.
ಈಚೆಗೆ ಅವರು ಸಮೀಪದ ನಿಡಗುಂದಿಕೊಪ್ಪದ ಶಾಖಾ ಮಠದಲ್ಲಿ ಮುಧೋಳದ ಯಶಸ್ವಿ ಸಾಹಿತ್ಯ ಮತ್ತು ಸಂಗೀತ ಸಂಸ್ಥೆ ಹಾಗೂ ಸಮೂಹ ಸಾಮರ್ಥ್ಯ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಮತ್ತು ಕಿವುಡ ಮತ್ತು ಮೂಗ ಮಕ್ಕಳಿಗೆ ಕರಕುಶಲ ತರಬೇತಿ ಹಾಗೂ ಯೋಗ ಶಿಬಿರದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಡಾ. ಪ್ರಮೀಳಾಬಾಯಿ ಕೋರಧಾನ್ಯಮಠ ಮಾತನಾಡಿ, ಇಂತಹ ತರಬೇತಿಯನ್ನು ಅಂದಾಜು 80 ವಿದ್ಯಾರ್ಥಿಗಳಿಗೆ ನೀಡುವ ಗುರಿಯನ್ನು ಹೊಂದಲಾಗಿದೆ. ಈ ತರಬೇತಿಯನ್ನು ಪಡೆದ ನೀವುಗಳೆಲ್ಲಾ ಸ್ವ ಉದ್ಯೋಗವನ್ನು ಕೈಗೊಂಡು ಜೀವನ ನಿರ್ಹಹಣೆಗೆ ಮಾಡಿಕೊಳ್ಳಬೇಕು ಎಂದರು.
ಉದ್ಘಾಟನೆಯನ್ನು ರಾಷ್ಟ್ರೀಯ ದಾಳಿಂಬೆ ಬೆಳೆಗಾರರ ಸಂಘದ ಉಪಾಧ್ಯಕ್ಷ ದೇವೇಂದ್ರಪ್ಪ ಬಳೂಟಗಿ ನೆರವೇರಿಸಿದರು.
ಅಧ್ಯಕ್ಷತೆ ವಹಿಸಿದ್ದ ಆಡಿ-ಜಿಗಳೂರು ಮಠದ ಸಿದ್ದೇಶ್ವರ ಶ್ರೀಗಳು ಆಶೀರ್ವಚನ ನೀಡಿದರು.
ಜಿಲ್ಲಾ ಜಲಾನಯನ ಅಭಿವೃದ್ದಿ ಅಧಿಕಾರಿ ಎಸ್.ಎಸ್. ಪಾಟೀಲ, ವಿ.ಕೆ. ಕಮತರ, ಕೋಮಲದೇವಿ ಕುದರಿಮೋತಿ, ಸಮೂಹ ಸಾಮರ್ಥ್ಯ ಸಂಸ್ಥೆಯ ಸಮನ್ವಯಾಧಿಕಾರಿ ಟಿ. ಚೌಧರಿ, ಪಾರ್ವತಿದೇವಿ ಹೊಂಬಳ, ನಿವೃತ್ತ ಶಿಕ್ಷಕ ಶಿವಪ್ಪ ಪಲ್ಲೇದ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

