ಶಾಸಕ ಸಿ.ಸಿ. ಪಾಟೀಲ ಆರೋಗ್ಯವಾಗಿದ್ದಾರೆ, ಆತಂಕ ಬೇಡ: ಹುಡೇದ
ನರಗುಂದ: ಮೆಣಸಗಿ ಗ್ರಾಮದಲ್ಲಿ ಈಚೆಗೆ ಅಚಾತುರ್ಯದಿಂದ ಗುಂಡು ತಗಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಾಸಕ ಸಿ.ಸಿ. ಪಾಟೀಲ ಅವರು ಆರೋಗ್ಯವಾಗಿದ್ದು, ಅಭಿಮಾನಿಗಳುಸ ಬಿಜೆಪಿ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ನರಗುಂದ ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ ಹುಡೇದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾರ್ಚ್ 17ರಿಂದ ಬೆಳಗಾವಿಯ ಕೆಎಲ್,ಇಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿ.ಸಿ. ಪಾಟೀಲರನ್ನು ಶುಕ್ರವಾರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈ ಕುರಿತು ಮಾಧ್ಯಮಗಳಲ್ಲಿ ಗೊಂದಲಕಾರಿ ಹೇಳಿಕೆ ಬರುತ್ತಿದ್ದು, ಸಹಜವಾಗಿ ಕಾರ್ಯಕರ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಶಾಸಕರ ಆರೋಗ್ಯ ಸ್ಥಿರವಾಗಿದ್ದು, ಕೆಲ ಹೆಚ್ಚಿನ ಚಿಕಿತ್ಸೆಗಳು ಅಗತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಈ ಕುರಿತು ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದಿದ್ದಾರೆ.
ಮಹಿಳಾ ದಿನಾಚರಣೆ
ನರೇಗಲ್ಲ: ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮಹಿಳೆ ಮುಂದೆ ಬರಬೇಕು ಎಂದು ಗದಗ ಕೆವಿಎಸ್,ಆರ್ ಪಪೂ ಮಹಾವಿದ್ಯಾಲಯದ ಶಿಕ್ಷಣಶಾಸ್ತ್ರ ಉಪನ್ಯಾಸಕಿ ಕವಿತಾ ಕಾಶಪ್ಪನವರ ತಿಳಿಸಿದರು. ಈಚೆಗೆ ಅವರು ಸ್ಥಳೀಯ ರೇಣುಕಾಚಾರ್ಯ ಪೂರ್ವ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು. ಹೆಣ್ಣು ಅಬಲೆಯಾಗದೆ ಸಬಲೆಯಾಗಬೇಕು. ಮೂಢ ನಂಬಿಕೆಯಿಂದ ಹೊರಬಂದು ವೈಜ್ಞಾನಿಕ ಭಾವ ಬೆಳೆಸಿಕೊಳ್ಳಬೇಕು ಎಂದರು. ಡಾ. ಮಂಗಲಾ ಕಾಳೆ, ಅಧ್ಯಕ್ಷತೆ ವಹಿಸಿದ್ದ ಡಾ. ಪ್ರಮಿಳಾಬಾಯಿ ಕೊರದಾನ್ಯಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾಗಿ ಡಾ. ಸಪ್ನಾ ಕಾಳೆ, ಧನಶ್ರೀ ಕಬಾಡಗಿ, ಅನ್ನಪೂರ್ಣ ಪಾಟೀಲ, ಶಶಿಕಲಾ ಪಾಟೀಲ ಇದ್ದರು. ಪಪಂ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯೆಯರನ್ನು ಹಾಗೂ ರಾಷ್ಟ್ರ ಮಟ್ಟದ ಜಂಪರೋಪ್ ಕ್ರೀಡೆಯಲ್ಲಿ ಭಾಗವಹಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ತೇಜಶ್ವಿನಿ ಕುಂಬಾರ, ನಯನಾ ಕಿನ್ನಾಳ, ಪೂರ್ಣಿಮಾ ಅಕ್ಕಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ್ದ ವಿದ್ಯಾಶ್ರೀ ಬೇವಿನಕಟ್ಟಿ, ವಿಜಯಲಕ್ಷ್ಮಿ ಜೋಗಿ ಮಕ್ಕಳಿಗೆ ಸನ್ಮಾನಿಸಲಾಯಿತು.
ಬಸ್ ಹಾಯ್ದು 15 ಕುರಿಗಳು ಸಾವು
ನರಗುಂದ: ಕೊಣ್ಣೂರು-ನರಗುಂದ ಹೆದ್ದಾರಿಗೆ ಹೊಂದಿಕೊಂಡಿರುವ ಹಳ್ಳಿಕೇರಿ ಮಡ್ಡಿ (ದಿಬ್ಬ) ಪಕ್ಕದ ಕಾಲುವೆ ಬಳಿ ಶುಕ್ರವಾರ ಬೆಳಗ್ಗೆ ಬಾಗಲಕೋಟೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ಸೊಂದು ಕುರಿಗಳ ಹಿಂಡಿನ ಮೇಲೆ ಹರಿದ ಪರಿಣಾಮ 15 ಕುರಿಗಳು ಸಾವನ್ನಪ್ಪಿವೆ. ಮೃತಪಟ್ಟ ಕುರಿಗಳು ಹಲಕುರ್ಕಿ ಗ್ರಾಮದ ರಂಗಪ್ಪ ಹುಂಡಿ ಅವರಿಗೆ ಸೇರಿದವು. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

