ಗದಗ

ಎಸ್ಸೆಸ್ಸೆಲ್ಸಿ ಪರೀಕ್ಷೆ

Published On :

ಮುಂಡರಗಿ: ತಾಲೂಕಿನಾದ್ಯಂತ ಏ. 1ರಿಂದ 10ರ ವರೆಗೆ ಬೆಳಗ್ಗೆ 9.30ರಿಂದ 12.45ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಜರುಗಲಿದೆ. ತಾಲೂಕಿನಲ್ಲಿ 819 ಬಾಲಕರು, 866 ಬಾಲಕಿಯರು ಸೇರಿ ಒಟ್ಟು 1,685 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ತಾಲೂಕಿನಾದ್ಯಂತ ಒಟ್ಟು 5 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಮುಂಡರಗಿ ಪಟ್ಟಣದ ಜೆ.ಎ. ಪ್ರೌಢಶಾಲೆಯಲ್ಲಿ 350, ಎಂ.ಎಸ್. ಡಂಬಳ ಪ್ರೌಢಶಾಲೆಯಲ್ಲಿ 350, ಜೆ.ಟಿ. ಪ್ರೌಢಶಾಲೆಯಲ್ಲಿ 332, ಪೇಠಾಲೂರು ಹಾಲಶಿವಯೋಗಿಶ್ವರ ಪ್ರೌಢಶಾಲೆಯಲ್ಲಿ 275, ಡಂಬಳದ ಜೆ.ಟಿ.ಪ್ರೌಢಶಾಲೆಯಲ್ಲಿ 378 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 81 ಮೇಲ್ವಿಚಾರಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಹಸೀಲ್ದಾರ, ಇಓ, ಬಿಇಓ ಅವರನ್ನು ಸ್ಥಳೀಯ ಹಾಗೂ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಮಟ್ಟದ ಜಾಗೃತ ದಳದ ಅಧಿಕಾರಿಗಳಾಗಿ, ಡಯಟ್ ಉಪನ್ಯಾಸಕರನ್ನು ಪ್ರತಿ ತಾಲೂಕಿಗೆ ಒಬ್ಬರಂತೆ ಪರೀಕ್ಷಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ರಡ್ಡೇರ ತಿಳಿಸಿದರು.

100 ಕಲಾವಿದರಿಂದ ನಾಳೆ ನೃತ್ಯ ಪ್ರದರ್ಶನ
ಶಿರಹಟ್ಟಿ:
ಮೌನೇಶ್ವರ ದೇವಸ್ಥಾನ ಹಾಗೂ ಮಠದ ವಿಕಾಸ ಟ್ರಸ್ಟ್ ಕಮಿಟಿಯ ಕ್ಷೇತ್ರ ವರವಿ ಹಾಗೂ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿಕ ಕೇಂದ್ರ ನಾಗಪುರ ಇವುಗಳ ಆಶ್ರಯದಲ್ಲಿ ಏ. 2ರ ಸಂಜೆ 7 ಗಂಟೆಗೆ ವರವಿ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ 6 ರಾಜ್ಯಗಳ 100 ಕಲಾವಿದರಿಂದ ವಿವಿಧ ನೃತ್ಯಗಳ ಪ್ರದರ್ಶನ ಜರುಗಲಿದೆ. ಸಾನ್ನಿಧ್ಯವನ್ನು ವರವಿ ಮೌನೇಶ್ವರ ಮಠದ ವಿರೂಪಾಕ್ಷ ಶ್ರೀಗಳು ವಹಿಸುವರು. ದೇವಸ್ಥಾನ ಕಮಿಟಿ ಅಧ್ಯಕ್ಷ ಚಂದ್ರಕಾಂತ ಸೋನಾರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ನಿವೃತ್ತ ಶಿಕ್ಷಕ ಎಸ್.ಡಿ. ಕಡ್ಲಿಕೊಪ್ಪ, ರವಿಂದ್ರಕುಮಾರ ಸಿಂಗಾಳ, ಗೋಪಾಲ ಬೆತ್‌ವರ ಆಗಮಿಸಲಿದ್ದಾರೆ ಎಂದು ಕಾರ್ಯದರ್ಶಿ ಮೋಹನ್ ನರಗುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. ರೇಣುಕಾಚಾರ್ಯರ ಜಯಂತ್ಯುತ್ಸವ ಇಂದು
ಗಜೇಂದ್ರಗಡ: 
ಸ್ಥಳೀಯ ವೀರಶೈವ ಸಮಾಜದ ವತಿಯಿಂದ ಜ. ರೇಣುಕಾಚಾರ್ಯರ ಜಯಂತ್ಯುತ್ಸವ ಏ. 1ರ ಸಂಜೆ 4 ಗಂಟೆಗೆ ಕಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ಸುಮಂಗಲಿಯರ ಆರತಿ, ಸಕಲ ಮಂಗಲ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಕಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ, ಸಮಾಜದ ಅಧ್ಯಕ್ಷ ಬಿ.ಎಂ. ಸಜ್ಜನ, ಪ್ರಭು ಚವಡಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.