ಗದಗ:15 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ಗದಗ: ನಗರದ ಒಟ್ಟು 15 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸೋಮವಾರದಿಂದ ನಡೆಯಲಿವೆ. ಪ್ರತಿ ಕೇಂದ್ರದಲ್ಲೂ ಆಸನ, ಶುದ್ಧ ಕುಡಿವ ನೀರು, ಗಾಳಿ, ಬೆಳಕು ಮುಂತಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ತಿಳಿಸಿದ್ದಾರೆ. ಪರೀಕ್ಷೆ ವ್ಯವಸ್ಥಿತವಾಗಿ ಮತ್ತು ಶಾಂತ ರೀತಿಯಿಂದ ನಡೆಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರತಿ ಕೇಂದ್ರಕ್ಕೆ 2 ಸಿಟ್ಟಿಂಗ್ ಸ್ಕ್ವಾಡ್ ನೇಮಿಸಲಾಗಿದೆ. ಮೂರು ತಂಡಗಳಿಂದ ತಾಲೂಕು ಜಾಗೃತ ದಳ, 1ನೇ ತಂಡ ತಹಸೀಲ್ದಾರರು, 2ನೇ ತಂಡ ತಾಪಂ ಇಓ, 3ನೇ ತಂಡ ಬಿಇಓ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿವೆ. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಸಹಾಯವಾಣಿ (ಹೆಲ್ಪ್ ಡೆಸ್ಕ್) ಆರಂಭಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು, ಕೊಠಡಿ ಮೇಲ್ವಿಚಾರಕರು, ಸಿಟ್ಟಿಂಗ್ ಸ್ಕ್ವಾಡ್, ಮುಖ್ಯ ಅಧೀಕ್ಷಕರು ಹಾಗೂ ಪರೀಕ್ಷಾ ಸಿಬ್ಬಂದಿಯನ್ನು ಹೊರತು ಪಡಿಸಿ ಬೇರೆಯವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಗದಗ ನಗರದ 15 ಕೇಂದ್ರಗಳಲ್ಲಿ 3,744 ಮಕ್ಕಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪಾಲಕರು ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ತೊಂದರೆಯಾದಲ್ಲಿ ಬಿಇಓ ಶಹರ ವಲಯದ ಕಾರ್ಯಾಲಯ ದೂ. 08372-278186, ಗದಗ ಶಹರ ಬಿಇಓ ಐ.ಬಿ. ಬೆನಕೊಪ್ಪ, ಮೊ. 9480695196, ಶಿಕ್ಷಣ ಸಂಯೋಜಕ ಎ.ಬಿ. ಕಾಳೆ, ಮೊ. 9880052827, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎ.ಎಂ. ಕುಂಟೋಜಿ, ಮೊ. 9480555779 ಅವರನ್ನು ಸಂಪರ್ಕಿಸಬಹುದು ಎಂದು ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕ ಎ.ಬಿ. ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

