ಗದಗ

ಬಿಜೆಪಿ ಅಭ್ಯರ್ಥಿ ರಾಮಣ್ಣ ಲಮಾಣಿ ಪರ ಪ್ರಚಾರ

Published On :

ಮುಂಡರಗಿ: ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮಣ್ಣ ಲಮಾಣಿ ಪರ ಗುರುವಾರ ಪಟ್ಟಣದ ಕಡ್ಲಿಪೇಟೆ, ಬಜಾರ, ಬೃಂದಾವನ ಸರ್ಕಲ್ ಸೇರಿ ವಿವಿಧೆಡೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಲಾಯಿತು.
ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವಿಜಯಕುಮಾರ ರಾಟಿ ಮಾತನಾಡಿ, 5 ವರ್ಷಗಳಲ್ಲಿ ರಾಮಣ್ಣ ಲಮಾಣಿ ಪುರಸಭೆಗೆ ರು. 30 ಕೋಟಿಗೂ ಅಧಿಕ ಅನುದಾನ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಿಸಲು ರು. 24 ಕೋಟಿ ಅನುದಾನವನ್ನು ತಂದಿದ್ದಾರೆ. ಮುಂಡರಗಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಾಂಕ್ರೀಟ್ ರಸ್ತೆಗಳು ಕಾಣುತ್ತಿವೆ. ಮೇ 5ರಂದು ಜರಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ  ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ ಆರಿಸಿ ತರುವಂತೆ ಮನವಿ ಮಾಡಿದರು. ಹೆಸರೂರ ಗ್ರಾಪಂ ಮಾಜಿ ಅಧ್ಯಕ್ಷ ಗುಡದಪ್ಪ ದೇಸಾಯಿ, ಸುರೇಶ ಜೈನ್, ಶಹರ ಬಿಜೆಪಿ ಅಧ್ಯಕ್ಷ ರಜನೀಕಾಂತ ದೇಸಾಯಿ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಕಾಗನೂರಮಠ ಪಾಲ್ಗೊಂಡಿದ್ದರು.

ಜನರ ಸೇವೆ ಮಾಡಲು ಅವಕಾಶ ನೀಡಿ: ಬಿದರೂರ
ಗದಗ: ಬಿಜೆಪಿಯು ತನ್ನ 5 ವರ್ಷದ ಅಧಿಕಾರಾವಧಿಯಲ್ಲಿ ಅದರಲ್ಲಿಯೂ ಗದಗ-ಬೆಟಗೇರಿ ಅವಳಿ ನಗರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಜನತೆ ಮರೆತಿಲ್ಲ. ಈ ಚುನಾವಣೆಯಲ್ಲಿ ಮತ್ತೆ ಜನತೆ ಬಿಜೆಪಿಗೆ ಆಶೀರ್ವದಿಸಲಿದ್ದಾರೆಂದು ಶಾಸಕ, ಗದಗ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಶೈಲಪ್ಪ ಬಿದರೂರ ಹೇಳಿದರು.
ಅವರು ಬುಧವಾರ ಬೆಟಗೇರಿಯ ವಾರ್ಡ್ ನಂ. 2ರಲ್ಲಿ ಗಾಂಧಿನಗರದ (ಸೆಟ್ಲಮೆಂಟ್ ಭಾಗದಲ್ಲಿ) ಹಮ್ಮಿಕೊಳ್ಳಲಾಗಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಾಗಲೇ ಅವಳಿ ನಗರದ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವ ಸದಾಶಯವನ್ನು ಹೊಂದಿದ್ದು, ಮೇ 5ರಂದು ಜರುಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗುರುತಿಗೆ ತಮ್ಮ ಮತ ನೀಡುವ ಮೂಲಕ ಮತ್ತೊಮ್ಮೆ ತಮ್ಮ ಸೇವೆ ಮಾಡಲು ಅನುವು ಮಾಡಿಕೊಡುವಂತೆ ಕೋರಿದರು.
ಗಾಂಧಿನಗರದಲ್ಲಿನ ಬಿಎಸ್‌ಆರ್ ಪಕ್ಷದ ಹಲವು ಕಾರ್ಯಕರ್ತರು ಬಿಜೆಪಿಗೆ  ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಂಜುನಾಥ ಬಾಗಲಕೋಟಿ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ, ಅರವಿಂದ ಹುಲ್ಲೂರ, ರಾಘವೇಂದ್ರ ವಜ್ರೇಶ್ವರಿ, ಲಿಂಗಯ್ಯ ದನ್ನೂರ ಹಿರೇಮಠ, ಭರತ ನವಲೂರಕರ, ನಾಗೇಶ ಕಬಾಡಿ, ಪಾಂಡು ಕಬಾಡಿ, ಮೂರ್ತಿ ಡಂಬಳ, ರಾಜು ಹಬೀಬ, ಮಧು ಹಬೀಬ, ಕೆ.ಎನ್. ನವಲೂರಕರ, ಅನೀಲ ನವಲೂರಕರ, ಮನೋಜ ನವಲೂರಕರ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.