ಗದಗ

ರಾಮಣ್ಣ ಲಮಾಣಿ ಜನರ ವಿಶ್ವಾಸ ಗಳಿಸಿದ್ದಾರೆ

Published On :

ಲಕ್ಷ್ಮೇಶ್ವರ: ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಲಕ್ಷ್ಮೇಶ್ವರ-ಹುಬ್ಬಳ್ಳಿ ರಸ್ತೆ ಹಾಗೂ ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸಿದ ಬಿಜೆಪಿ ಸರ್ಕಾರಕ್ಕೆ ತಮ್ಮ ಮತ ನೀಡುವಂತೆ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ ಹೇಳಿದರು. ಅವರು ಶುಕ್ರವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ, ಶಾಸಕ ರಾಮಣ್ಣ ಲಮಾಣಿಯವರ ಪರ ಮಚಯಾಚಿಸಿ ಮಾತನಾಡಿದರು. ಶಾಸಕ ರಾಮಣ್ಣ ಲಮಾಣಿ 5 ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಎಲ್ಲ ವರ್ಗದ ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಜನರಿಗೆ ಅವರ ಮೇಲೆ ವಿಶ್ವಾಸವಿದ್ದು, ಮತ್ತೊಮ್ಮೆ ಶಾಸಕ ರಾಮಣ್ಣ ಲಮಾಣಿಯ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚಂಬಣ್ಣ ಬಾಳಿಕಾಯಿ, ಬಸವರಾಜ ಹತ್ತಿಕಾಳ, ಮೈಲಾರಪ್ಪ ಅಗಡಿ, ಡಾ. ವೈ.ಎಫ್. ಹಂಜಿ, ಸೋಮಣ್ಣ ಮುಳಗುಂದ, ಸುಭಾಷ ಬಟಗುರ್ಕಿ, ನಿಂಗಪ್ಪ ಬನ್ನಿ, ಲೆಂಕೆಪ್ಪ ಸೆರಸೂರಿ, ನೀಲಪ್ಪ ಕರ್ಜೆಕಣ್ಣವರ, ತಾವರೆಪ್ಪ ಲಮಾಣಿ, ಸಿದ್ದನಗೌಡ ಬಳ್ಳೊಳ್ಳಿ, ನಾಗರಾಜ ಚಿಂಚಲಿ, ಸತೀಶ ಮೆಕ್ಕಿ, ವಿನಾಯಕ ಪಾಟೀಲ, ಬಸವರಾಜ ಅರಳಿ, ರಾಘವೇಂದ್ರ ಪೂಜಾರ, ಜೈರುದ್ದೀನ ಪಟವೇಗಾರ, ಜಾಫರಸಾಬ ಸೂರಣಗಿ, ಷಣ್ಮುಕಪ್ಪ ಗೋಡಿ, ಶೇಖಪ್ಪ ಗಡಿಗಿ ಮುಂತಾದವರು ಪಾಲ್ಗೊಂಡಿದ್ದರು.

ಇಂದು ಸಾಹಿತ್ಯ ಸಂಜೆ ಉಪನ್ಯಾಸ ಕಾರ್ಯಕ್ರಮ
ಗದಗ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಸಾಹಿತ್ಯ ಸಂಜೆಯ ಕಾರ್ಯಕ್ರಮದ ಉಪನ್ಯಾಸ ಮೇ 4ರಂದು ಸಂಜೆ 6 ಗಂಟೆಗೆ ತಾಪಂ ಆವರಣದಲ್ಲಿರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆಯಲಿದೆ. ಗದುಗಿನ ಕೆಎಲ್‌ಇ ಕಲಾ ಹಾಗೂ ವಾಣಿಜ್ಯ ಕಾಲೇಜಿನ ಇತಿಹಾಸ ಸಹ ಪ್ರಾಧ್ಯಾಪಕ ಪ್ರೊ೤ ತಾರಾ ಬಿ.ಎನ್. ಅವರು ವಚನಕಾರರ ದೃಷ್ಟಿಯಲ್ಲಿ ಮಹಿಳೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಶಾಂತಲಾ ಜಂಗಮನಿ ಕವನ ವಾಚನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ೤ ಶಿವಪ್ಪ ಕುರಿ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರು. 3 ಲಕ್ಷ ನಗದು ವಶ
ನರಗುಂದ: ತಾಲೂಕಿನ ಹದ್ಲಿ ಕ್ರಾಸ್ ಬಳಿ ಗುರುವಾರ ರಾತ್ರಿ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಮಲ್ಲಿಕಾರ್ಜುನ ಪಾಟೀಲ ಎಂಬುವರು ಯಾವುದೇ ದಾಖಲೆ ಇಲ್ಲದೆ ಒಯ್ಯುತ್ತಿದ್ದ ರು. 3 ಲಕ್ಷ ನಗದನ್ನು ಜಾಗೃತ ದಳದ ಅಧಿಕಾರಿಗಳು ವಾಹನ ತಡೆದು ತಪಾಸಣೆ ಮಾಡಿ, ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.

ಅಕ್ರಮ ಮದ್ಯ ವಶ
ಗದಗ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರು. 29 ಸಾವಿರ ಮೌಲ್ಯದ 264 ಬಾಟಲ್ ಮದ್ಯವನ್ನು ನಗರ ಠಾಣೆ ಪೊಲೀಸರು ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ. ಪರಿಶೀಲನೆ ವೇಳೆ ಕಾರು ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.