ಅನಾಚಾರ ತಡೆಗೆ ಶರಣರ ತತ್ವ ಅವಶ್ಯ
ಮುಂಡರಗಿ: ದೇಶಾದ್ಯಂತ ಹೆಣ್ಣು ಮಕ್ಕಳು, ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಜನತೆಯ ಮನ ಪರಿವರ್ತನೆಗಾಗಿ ಶರಣರ ತತ್ವಗಳನ್ನು ಬಿಂಬಿಸಲು ಹೊರಟಿರುವ ಕದಳಿ ಮಹಿಳಾ ವೇದಿಕೆ, ತಾಲೂಕು ಶರಣ ಸಾಹಿತ್ಯ ಪರಿಷತ್‌ನಂತಹ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದು ಪ್ರೊ. ಸಿ.ಎಸ್. ಅರಸನಾಳ ಹೇಳಿದರು.
ಈಚೆಗೆ ಅವರು ಪಟ್ಟಣದ ಸಂಗಣ್ಣ ಲಿಂಬಿಕಾಯಿಯವರ ಮನೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ಸ್ಥಳೀಯ ಕದಳಿ ಮಹಿಳಾ ವೇದಿಕೆ ಆಶ್ರಯದಲ್ಲಿ ವೈರಾಗ್ಯ ನಿಧಿ ಅಕ್ಕಮಹಾದೇವಿ ಜಯಂತಿ ಪ್ರಯುಕ್ತ ಅನುಭವ ಮಂಟಪದಲ್ಲಿ ಅಕ್ಕ ಕುರಿತು ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೊಡ್ಡ ದೊಡ್ಡ ನಗರಗಳಲ್ಲಿ ನಡೆಯುತ್ತಿರುವ ಅತ್ಯಾಚಾರ, ಅನಾಚಾರಗಳಂತಹ ಹೀನ ಕೃತ್ಯ ತಡೆಯಲು ಶರಣರ ತತ್ವಾದರ್ಶಗಳನ್ನು ಮನೆ, ಮನೆಗೆ ಮುಟ್ಟಿಸುವ ಕಾರ್ಯ ನಡೆಯಬೇಕಿದೆ ಎಂದರು.
ಪ್ರೊ. ಆರ್.ಎಲ್. ಪೊಲೀಸಪಾಟೀಲ ಮಾತನಾಡಿದರು. ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಸೀತಾ ಬಸಾಪುರ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕಿ ಸುನಂದಾ ಹಂಚಿನಾಳ, ಶಾಂತಾ ಕಲ್ಲಕುಟಗಾರ, ಶಾಂತಾ ಕಾವಲದಂಡಿ ಅವರನ್ನು ಸನ್ಮಾನಿಸಲಾಯಿತು. ಪ್ರೊ. ಎಸ್.ಆರ್. ಬಸಾಪುರ, ಎ.ವೈ. ನವಲಗುಂದ, ಸಂಗಣ್ಣ ಲಿಂಬಿಕಾಯಿ, ಶಿವಯೋಗಿ ಕೊಪ್ಪಳ, ವಿ.ಸಿ. ಹಂಚಿನಾಳ, ಶೋಭಾ ಮೇಟಿ, ಪ್ರಾಚಾರ್ಯ ವೀರಪ್ಪ ವಟ್ನಾಳ, ಗೂಳಪ್ಪ ಕುಂಬಾರ, ಅನ್ನಪೂರ್ಣ ಕುಬಸದ ಉಪಸ್ಥಿತರಿದ್ದರು. ಗಿರಿಜಾ ಹಸಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರಮ್ಮ ಹುರಕಡ್ಲಿ ಸ್ವಾಗತಿಸಿದರು. ತನುಜಾ ಕಲ್ಲಕುಟುಗರ ನಿರೂಪಿಸಿದರು. ಗಿರಿಜಾ ಸೂಡಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

