ಯುಪಿಎಸ್ಸಿ: ಜಲರಡ್ಡಿ 232ನೇ ರ್ಯಾಂಕ್
ಕನ್ನಡಪ್ರಭ ವಾರ್ತೆ, ಗದಗ, ಮೇ 4
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2012ರ ಪರೀಕ್ಷೆಯಲ್ಲಿ ಉತ್ತಮ ಯಶಸ್ಸು ಸಾಧಿಸಿರುವ ತಾಲೂಕಿನ ದುಂದೂರು ಗ್ರಾಮದ ಜಗುನಾಥರಡ್ಡಿ ನಿಂಗರಡ್ಡಿ ಜಲರಡ್ಡಿ ಅವರು, 232ನೇ ರ್ಯಾಂಕ್ ಪಡೆಯುವ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿಕೊಂಡು, ಜಿಲ್ಲೆಗೆ ಹೆಮ್ಮೆಯ ಗರಿ ಮೂಡಿಸಿದ್ದಾರೆ.
ಈಗಾಗಲೇ ಕೆಎಎಸ್ ಪರೀಕ್ಷೆಯಲ್ಲಿ ತೇರ್ಗೆಡೆಹೊಂದಿರುವ ಜಗುನಾಥರಡ್ಡಿ ಜಲರಡ್ಡಿ ಜಮಖಂಡಿಯ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಐಎಎಸ್ ತೇರ್ಗೆಡೆಯಾಗುವ ಕನಸನ್ನು ಕಂಡಿದ್ದ ಇವರು, ಸತತ 3 ಬಾರಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿ 4ನೇ ಬಾರಿಗೆ ಉತ್ತಮ ಫಲಿತಾಂಶದೊಂದಿಗೆ ಹೊರಹೊಮ್ಮಿದ್ದಾರೆ.
1 ರಿಂದ 7 ತರಗತಿಯ ವರೆಗೆ ದುಂದೂರು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪೂರೈಸಿದ ಅವರು, 8-10ರ ವರೆಗೆ ಹುಲಕೋಟಿ ಗ್ರಾಮದ ಎಸ್ಆರ್ಎಜಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದ್ದಾರೆ. ಗದಗ ನಗರದ ಜೆ.ಟಿ. ಮಹಾವಿದ್ಯಾಲಯದಲ್ಲಿ ಪಿಯುಸಿ ಶಿಕ್ಷಣ ಮುಗಿಸಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಅಗ್ರಿಕಲ್ಚರ್ ಪದವಿ ಪಡೆದು 5 ಗೋಲ್ಡ್ ಮೆಡಲ್ ಗಳಿಸಿದ್ದಾರೆ. ಜಿಕೆವಿಕೆದಲ್ಲಿ ಎಂಎಸ್ಸಿ ಪದವಿ ಮುಗಿಸಿ, 3 ಗೋಲ್ಡ್ ಮೆಡಲ್ ಪಡೆದು ಕೀರ್ತಿಗೆ ಪಾತ್ರರಾಗಿದ್ದಾರೆ. ಜಗುನಾಥರಡ್ಡಿ ಅವರ ತಂದೆಯವರಾದ ನಿಂಗರಡ್ಡಿ ಅವರು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ 2008ರಲ್ಲಿ ನಿವೃತರಾಗಿದ್ದು, ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

