ಎಚ್ಕೆ, ಬಂಡಿ, ಸಿ.ಸಿ. ಪಾಟೀಲ್ ಮತ
ಗದಗ: ವಿಧಾನಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಪ್ರಮುಖರು ಭಾನುವಾರ ಮತದಾನ ಮಾಡಿದರು. ಗದಗ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ. ಪಾಟೀಲ ಹುಲಕೋಟಿಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ಮಾರ್ಚ್ 17ರಂದು ಗುಂಡೇಟಿನಿಂದ ಗಾಯಗೊಂಡಿದ್ದ ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಎರಡು ದಿನಗಳ ಹಿಂದಷ್ಟೇ ನರಗುಂದ ಕ್ಷೇತ್ರಕ್ಕೆ ಮರಳಿದ್ದು, ಭಾನುವಾರ ಪಟ್ಟಣದ 66ನೇ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಗುಂಡೇಟಿನಿಂದ ಚೇತರಿಸಿಕೊಂಡಿರುವ ಅವರು ಆಪ್ತರ ನೆರವಿನೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಗಜೇಂದ್ರಗಡ ಪಟ್ಟಣದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಗದಗನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಶೈಲಪ್ಪ ಬಿದರೂರ, ಬಿಎಸ್ಸಾರ್ ಅಭ್ಯರ್ಥಿ ಅನಿಲ ಮೆಣಸಿನಕಾಯಿ, ಕೆಜೆಪಿಯ ಎಸ್.ಬಿ. ಸಂಕಣ್ಣವರ ಮತದಾನ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಲಕ್ಷ್ಮೇಶ್ವರದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ವಿ.ವಿ. ಕಪ್ಪತ್ತನವರ ಶಿರಹಟ್ಟಿಯಲ್ಲಿ, ಕೆಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಗದಗನಲ್ಲಿ ಮತದಾನ ಮಾಡಿದರು. ರೋಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ, ಶಿರಹಟ್ಟಿ ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ, ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಕುಂದ್ರಳ್ಳಿಯಲ್ಲಿ ಮತದಾನ ಮಾಡಿದರು. ಜಿಲ್ಲೆಯ ಪ್ರಮುಖ ಸ್ವಾಮೀಜಿಗಳೂ ಮತದಾನ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

