ದ್ವಿತೀಯ ಪಿಯುಸಿ: ದೀಪಾ ಯಾಳಗಿಶೆಟ್ಟರ್ ಜಿಲ್ಲೆಗೆ ಪ್ರಥಮ
ಕನ್ನಡಪ್ರಭ ವಾರ್ತೆ, ಗದಗ, ಮೇ 7
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ದೀಪಾ ಯಾಳಗಿಶೆಟ್ಟರ ಶೇ. 95.5 (ಪಿಸಿಎಂಬಿ ಶೇ 96.7) ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಅಭಿಲಾಷ್ ಸೋಗಿ ಶೇ. 94.5 (ಪಿಸಿಎಂಬಿ ಶೇ. 95) ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಶ್ವೇತಾ ಅರಕೇರಿ ಶೇ. 89 ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾಳೆ.
ವಾಣಿಜ್ಯ ವಿಭಾಗದಲ್ಲಿ ಪ್ರದೀಪ್ ಶೇಟ್ ಶೇ. 92 ಪ್ರಥಮ, ಸುಧಾ ರಡ್ಡೇರ್ ಶೇ. 85.3 ದ್ವಿತೀಯ ಹಾಗೂ ಸವಿತಾ ಮುದೇನಗುಡಿ ಶೇ. 84.66 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಗಿರಿಜಾ ಕೋಟೆನ್ನವರ ಶೇ. 86.66 ಪ್ರಥಮ, ವಿರೇಶ್ ಬೀಳಗಿ ಶೇ. 83.66 ದ್ವಿತೀಯ ಹಾಗೂ ಶ್ರೀದೇವಿ ಕಲಕೇರಿ ಶೇ. 83.5 ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಕಾಲೇಜಿನ ಒಟ್ಟು ಫಲಿತಾಂಶ ಶೇ. 92, ವಾಣಿಜ್ಯ ವಿಭಾಗದ ಒಟ್ಟು ಶೇ. 85, ಹಾಗೂ ವಿಜ್ಞಾನ ವಿಭಾಗದ ಒಟ್ಟು ಫಲಿತಾಂಶ ಶೇ. 85 ರಷ್ಟಾಗಿದೆ. ಕಾಲೇಜಿನಲ್ಲಿ ಒಟ್ಟು 185 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 8 ಡಿಸ್ಟಿಂಕ್ಷನ್, 85 ಪ್ರಥಮ ವರ್ಗ, 42 ದ್ವಿತೀಯ ವರ್ಗ ಹಾಗೂ 25 ತೃತೀಯ ವರ್ಗದಲ್ಲಿ ತೇರ್ಗಡೆಯಾಗಿದ್ದಾರೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ಎಸ್. ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

