ಶಿರಹಟ್ಟಿ: ಕಾಂಗ್ರೆಸ್ ಪಾಳೆಯದಲ್ಲಿ ಸಂಭ್ರಮ
ಶಿರಹಟ್ಟಿ: ಪ್ರತಿಷ್ಠಿತ ಶಿರಹಟ್ಟಿ ಮೀಸಲು ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್‌ನ ರಾಮಕೃಷ್ಣ ದೊಡಮನಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟ್ಟಣದ ಮಾರುಕಟ್ಟೆ, ಬಸವೇಶ್ವರ ವೃತ್ತ, ವಾಲ್ಮೀಕಿ ವೃತ್ತ, ಮ್ಯಾಗೇರಿ ಓಣಿ, ಕುರುಬರ ಓಣಿ, ಮರಾಠಗಲ್ಲಿಯಲ್ಲಿ ಮೆರವಣಿಗೆ ನಡೆಸಿ, ಪರಸ್ಪರ ಗುಲಾಲ ಎರಚಿ ಸಂಭ್ರಮಿಸಿದರು. ಕಾಂಗ್ರೆಸ್ ಮುಖಂಡ ವೈ.ಎಸ್. ಪಾಟೀಲ ಮಾತನಾಡಿ, ಕಾರ್ಯಕರ್ತರ ಸಂಘಟನೆ, ಪರಿಶ್ರಮ, ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಎಲ್ಲ ವರ್ಗದ ಜನರಿಗೆ ಅನುಕೂಲವಾಗುವಂತೆ ಜಾರಿಗೆ ತಂದ ಜನಪರ ಯೋಜನೆಗಳು, ಪಕ್ಷದ ತತ್ವ-ಸಿದ್ಧಾಂತಗಳು, ರಾಜ್ಯದಲ್ಲಿ 5 ವರ್ಷ ಆಡಳಿತಾವಧಿಯಲ್ಲಿ ಬಿಜೆಪಿ ನಡೆಸಿದ ದುರಾಡಳಿತವೇ ಕಾಂಗ್ರೆಸ್ ಗೆಲುವಿಗೆ ಕಾರಣ ಎಂದರು. ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ತೆರೆದ ವಾಹನದಲ್ಲಿ ಸಂಚರಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಹುಮಾಯೂನ ಮಾಗಡಿ, ಸಂತೋಷ ಕುರಿ, ಮಂಜು ಘಂಟಿ, ಪರಮೇಶಿ ಪರಬ, ಯಲ್ಲಪ್ಪ ಹಾಲಪ್ಪನವರ, ನಾಗರಾಜ ಪೋತರಾಜ, ರಫೀಕ ಹೆಗಡೆ, ಅಪ್ಪಣ್ಣ ಕುಬೇರ, ನಾಗರಾಜ ಡಂಬಳ, ಮಹಾಂತೇಶ ದಶಮನಿ ಹಾಗೂ ನೂರಾರು ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

