ಉತ್ತಮ ದಲಿತ ಸಾಹಿತ್ಯ ಕೃತಿಗೆ ಬಹುಮಾನ
ಗದಗ: ಚಿತ್ರದುರ್ಗದಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಎಲ್.ಬಸವರಾಜು ರು. 1 ಲಕ್ಷ ಮೊತ್ತದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಮೃತಮಹೋತ್ಸವ ಸವಿ ನೆನಪು ದತ್ತಿಯನ್ನು ಸ್ಥಾಪಿಸಿದ್ದಾರೆ. ಅದರ ಬಡ್ಡಿ ಹಣದಿಂದ ಉತ್ತಮ ದಲಿತ ಸಾಹಿತ್ಯ ಕೃತಿಗೆ ರು. 5 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. 2012ರಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ದಲಿತ ಸಾಹಿತ್ಯ ಕೃತಿಯ ಮೂರು ಪ್ರತಿಗಳನ್ನು ಜೂ. 30ರೊಳಗೆ ಸ್ಪರ್ಧೆಗೆ ಕಳಿಸಬಹುದು. ಅವುಗಳನ್ನು ಮರಳಿಸುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರ ಶಿಫಾರಸು ಅಂತಿಮ. ಒಂದಕ್ಕಿಂತ ಹೆಚ್ಚು ಪುಸ್ತಕಗಳು ಆಯ್ಕೆಯಾದರೆ ಬಹುಮಾನದ ಮೊತ್ತವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ. ಅರ್ಹ ಕೃತಿಗಳು ಬಾರದಿದ್ದರೆ ಪ್ರಶಸ್ತಿ ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ. ಮಾಹಿತಿಗಾಗಿ ದೂ. 080-26623584 ಹಾಗೂ ಗೌರವ ಕಾರ್ಯದರ್ಶಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಇಂದು ಕರ್ನಾಟಕ ತಂಡಕ್ಕೆ ಆಯ್ಕೆ ಶಿಬಿರ
ನರೇಗಲ್ಲ: ರಾಷ್ಟ್ರಮಟ್ಟದ ಮಲ್ಲಕಂಬ ಟೂರ್ನಿಗೆ ದಕ್ಷಿಣ ವಲಯದ ಕಿರಿಯ, ಹಿರಿಯ ಮಲ್ಲಕಂಬ ಹಾಗೂ ರೋಪ್ ಮಲ್ಲಕಂಬ ತಂಡದ ಆಯ್ಕೆ ರಾಜ್ಯ ಮಲ್ಲಕಂಬ ಸಂಸ್ಥೆ ಹಾಗೂ ನರೇಗಲ್ಲನ ಸಿರಿಗನ್ನಡ ಕಲಾ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ಆಶ್ರಯದಲ್ಲಿ ಸ್ಥಳೀಯ ಮೇ 10ರ ಮಧ್ಯಾಹ್ನ 12 ಗಂಟೆಗೆ ಸ್ಥಳೀಯ ಓಂ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ಜರುಗಲಿದೆ. ಕಡ್ಡಾಯ ಮತ್ತು ಐಚ್ಛಿಕ ಸ್ಥಿರ ಮಲ್ಲಕಂಬ, ತೂಗು ಮಲ್ಲಕಂಬ, ಹಗ್ಗದ ಮಲ್ಲಕಂಬ ತಂಡಗಳಿಗೆ 12ರಿಂದ 18 ವರ್ಷದ ಬಾಲಕರು ಹಾಗೂ ಬಾಲಕಿಯರನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮಲ್ಲಕಂಬ ಕ್ರೀಡಾಪಟುಗಳು ಭಾಗವಹಿಸಲು ಮುಕ್ತ ಅವಕಾಶವಿದೆ. ತಮ್ಮ ಇತ್ತೀಚಿನ 2 ಭಾವಚಿತ್ರಗಳನ್ನು ಲಗತ್ತಿಸಿದ ಅರ್ಹತಾ ಪ್ರಮಾಣ ಪತ್ರದೊಂದಿಗೆ ಮೇ 10ರ ಮಧ್ಯಾಹ್ನ 12 ಘಂಟೆಯೊಳಗೆ ನೋಂದಾಯಿಸಿಕೊಳ್ಳಬೇಕು. ಮಾಹಿತಿಗಾಗಿ ಮೊ. 9164539466, 9916054401, 9886040853, 9538382753 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮಹಿಳೆ ಆತ್ಮಹತ್ಯೆ
ಗದಗ: ಹೊಟ್ಟೆ ಮತ್ತು ಕೈಕಾಲು ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಗ್ರಾಮದ ನಿವಾಸಿ ಗುಣವಂತವ್ವ ಬಸವರಾಜ ಅಂಗಡಿ (30) ಎಂದು ಗುರುತಿಸಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ಆಕೆಯನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪಚಾರ ಫಲಿಸದೆ ಮೃತಪಟ್ಟಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

