ಜನರ ವಿಶ್ವಾಸಕ್ಕೆ ಧಕ್ಕೆ ಬರದಂತೆ ಕಾರ್ಯನಿರ್ವಹಿಸಿ
ಕನ್ನಡಪ್ರಭ ವಾರ್ತೆ, ಮುಂಡರಗಿ, ಮೇ 9
ಮತಕ್ಷೇತ್ರ ಕಳೆದುಕೊಂಡು ಅನಾಥ ಪ್ರಜ್ಞೆಯಲ್ಲಿರುವ ಮುಂಡರಗಿ ಜನತೆ ಕ್ಷೇತ್ರದ ಅಭಿವೃದ್ಧಿಗಾಗಿ ನಿಮ್ಮನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಜನತೆ ನಿಮ್ಮ ಮೇಲಿಟ್ಟಿರುವ ವಿಶ್ವಾಸಕ್ಕೆ ಧಕ್ಕೆ ಬರದಂತೆ ಮುಂಡರಗಿ ಹಾಗೂ ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವಂತೆ ರಾಮಕೃಷ್ಣ ದೊಡ್ಡಮನಿಯವರಿಗೆ ನಾಡೋಜ ಡಾ. ಅನ್ನದಾನೀಶ್ವರ ಶ್ರೀ ಸಲಹೆ ನೀಡಿದರು.
ರಾಮಕೃಷ್ಣ ದೊಡ್ಡಮನಿಯವರು ಗುರುವಾರ ಶ್ರೀಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಆಶೀರ್ವದಿಸಿ ಮಾತನಾಡಿದರು. ಅಧಿಕಾರದ ಅವಧಿಯಲ್ಲಿ ಜನ ಸಾಮಾನ್ಯರ ನೋವು ನಲಿವುಗಳಿಗೆ ಸ್ಪಂದಿಸಬೇಕು. ತಾಲೂಕಿನಲ್ಲಿ ಸಣ್ಣ ಕೈಗಾರಿಕೆಗಳ ಅವಶ್ಯವಿದ್ದು, ಅವುಗಳನ್ನು ಪ್ರಾರಂಭಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕು. ದೊಡ್ಡಮನಿಯವರು ಯಾವುದೇ ಜಾತಿ, ಭೇದವೆನ್ನದೆ ಪಟ್ಟಣದಲ್ಲಿ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುವ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ. ಶ್ರೀಮಠದ ಆಶೀರ್ವಾದ ಇವರಿಗೆ ಸದಾ ಶ್ರೀರಕ್ಷೆಯಾಗಿರುತ್ತದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಉನ್ನತ ಹುದ್ದೆಗೆ ಏರುವಂತಾಗಲಿ ಎಂದರು.
ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಅನ್ನದಾನೀಶ್ವರ ಶ್ರೀಗಳು ಈ ಭಾಗದ ನಡೆದಾಡುವ ದೇವರಾಗಿದ್ದು, ಅವರ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ತಾವು ಈ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ತಿಳಿಸಿದರು. ರಾಮಕೃಷ್ಣ ದೊಡ್ಡಮನಿಯವರ ಪತ್ನಿ ಯಂಕಮ್ಮ ದೊಡ್ಡಮನಿ ಮತ್ತಿತರರು ಇದ್ದರು. ಇದಕ್ಕೂ ಮೊದಲು ಮಂತ್ರಾಲಯ ರಾಘವೇಂದ್ರ ಶಾಖಾಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ ಕೋಟೆ ಹನುಮಂತದೇವರ ಗುಡಿ, ಹಾಗೂ ಕೋಟೆ ದುರ್ಗಾದೇವಿ ದೇವಸ್ಥಾನ ಮತ್ತು ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

