ಗದಗ

ರೋಣ: ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

Published On :

ರೋಣ: ರೋಣ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ ಗೆಲವು ಸಾಧಿಸುತ್ತಿದ್ದಂತೆ ಬುಧವಾರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ರೋಣ ಕ್ಷೇತ್ರ ವ್ಯಾಪ್ತಿಯ ರೋಣ, ಗಜೇಂದ್ರಗಡ, ಕೊತಬಾಳ, ಅರಹುಣಸಿ, ಹಿರೇಹಾಳ, ನೈನಾಪುರ, ಚಿಕ್ಕಮಣ್ಣೂರ, ಅಬ್ಬಿಗೇರಿ, ಹೊಸಳ್ಳಿ, ಇಟಗಿ, ತಳ್ಳಿಹಾಳ, ಹಿರೇ ಅಳಗುಂಡಿ, ದಿಂಡೂರ, ಹಿರೇಮಣ್ಣೂರ, ಮುಗಳಿ, ಮಾರನಬಸರಿ, ಜಕ್ಕಲಿ, ಹಾಳಕೇರಿ, ನಿಡಗುಂದಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ವಿಜಯೋತ್ಸವ ಆಚರಿಸಿದರು.  
ಗೆಲುವು ಸಾಧಿಸಿ ಪಟ್ಟಣಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲರನ್ನು ಗದಗ ರಸ್ತೆಯಲ್ಲಿನ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಕಾಲೇಜು ಮುಂದೆ ಸುಮಂಗಲೆಯರಿಂದ ಆರತಿ ಬೆಳಗುವುದರ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಮತ್ತು ಆಶೀರ್ವದಿಸಿದ ಜನತೆಗೆ ಅಭಿನಂದನೆ ಸಲ್ಲಿಸಲು ತೆರೆದ ವಾಹನವೇರಿದಾಗ ಕಾರ್ಯಕರ್ತರು ಜಿ.ಎಸ್. ಪಾಟೀಲರಿಗೆ ಕ್ಷೀರಾಭಿಷೇಕ ನೆರವೇರಿಸಿದರು. ಬಳಿಕ ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಸಂಚರಿಸಿ ಗೆಲುವಿಗೆ ಕಾರಣರಾದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.