ಕಾಂಗ್ರೆಸ್ ಗೆಲವಿನಿಂದ ಸಂತಸ: ಟಿ. ಈಶ್ವರ
ಲಕ್ಷ್ಮೇಶ್ವರ: ಗದಗ ಜಿಲ್ಲೆಯಲ್ಲಿನ ನಾಲ್ಕೂ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನ ನೆಲೆ ಕಂಡುಕೊಳ್ಳುವಲ್ಲಿ ಸಫಲವಾಗಿದ್ದು, ನನಗೆ ಸಂತಸ ತಂದಿದೆ ಎಂದು ರಾಜ್ಯ ಕಾಂಗ್ರೆಸ್ ಎಸ್.ಟಿ. ಘಟಕದ ಅಧ್ಯಕ್ಷ ಟಿ. ಈಶ್ವರ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಹಟ್ಟಿ ಮತಕ್ಷೇತ್ರದಲ್ಲಿ ರಾಮಕೃಷ್ಣ ದೊಡ್ಡಮನಿಯವರ ಗೆಲವು ಪಕ್ಷದ ಕಾರ್ಯಕರ್ತರಲ್ಲಿ ಹೆಚ್ಚಿನ ಹುಮ್ಮಸ್ಸು ತಂದಿದೆ. ರಾಮಕೃಷ್ಣ ಅವರ ಗೆಲವಿಗೆ ಕಾರ್ಯಕರ್ತರ ಪರಿಶ್ರಮ ಕಾರಣವಾಗಿದೆ. ಗದಗ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ, ಹಿರಿಯ ನಾಯಕರಾದ ಎಚ್.ಕೆ. ಪಾಟೀಲ, ಜಿ.ಎಸ್. ಪಾಟೀಲ, ಸತೀಶ ಜಾರಕಿಹೊಳಿ, ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ನಮ್ಮ ಪಕ್ಷದ ಗೆಲುವಿಗೆ ಕಾರಣರಾಗಿದ್ದಾರೆ. ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡುವ ಮೂಲಕ ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ನಾವು ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದರು.
ನೀರು ಪೂರೈಕೆ ಮಾಹಿತಿ
ಗದಗ: ನಗರದ ವಿವೇಕಾನಂದ ರಸ್ತೆಯ ಉಳಿದ ಭಾಗ, ಪಂಚಾಕ್ಷರಿ ನಗರ, ಹಾತಲಗೇರಿ ನಾಕಾ, ಚರ್ಚ್ ರಸ್ತೆ, ಭೂಮರಡ್ಡಿ ವೃತ್ತ, ಮಹಾವೀರ ಕಾಲನಿ, ಮಹಾಕೂಟೇಶ್ವರ ಸಂಧಿ, ಕಾಶೀ ವಿಶ್ವನಾಥ ನಗರ, ಸಂಭಾಪುರ ರಸ್ತೆ, ಪೊಲೀಸ್ ಕ್ವಾರ್ಟರ್ಸ್ ಈ ಭಾಗಗಳಲ್ಲಿ ಶುಕ್ರವಾರ ತುಂಗಭದ್ರಾ ನದಿ ನೀರು ಪೂರೈಕೆ ಮಾಡಲಾಗುವುದು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
ಮೀನುಗಾರಿಕೆ ತರಬೇತಿಗೆ ಆಹ್ವಾನ
ಗದಗ: 34ನೇ ತಂಡದ ಒಳನಾಡು ಮೀನುಗಾರಿಕೆ ತರಬೇತಿ ಪುರುಷರಿಗೆ ಜೂನ್ 1ರಿಂದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೀನುಗಾರಿಕೆ ತರಬೇತಿ ಕೇಂದ್ರದಲ್ಲಿ ಪ್ರಾರಂಭವಾಗುವುದು. ಮಾಸಿಕ ರು. 1 ಶಿಷ್ಯವೇತನವಿದೆ. 18-40 ವಯೋವುತಿಯ ಬೀದರ್, ಗುಲ್ಬರ್ಗಾ, ಯಾದಗಿರಿ, ಚಿತ್ರದುರ್ಗ, ರಾಯಚೂರು, ಧಾರವಾಡ, ಬಿಜಾಪುರ, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ಗದಗ, ಕೊಪ್ಪಳ, ದಾವಣಗೆರೆ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ ಜಿಲ್ಲೆ ನಿವಾಸಿಗಳು ಅರ್ಜಿ ಸಲ್ಲಿಸಬಹುದು. ಉಚಿತ ವಸತಿ ಸೌಲಭ್ಯವಿದೆ. ಅರ್ಜಿಯನ್ನು ಅಂಚೆ ಮೂಲಕ ಪಡೆಯಬೇಕಿದ್ದಲ್ಲಿ ಕೋರಿಕೆ ಪತ್ರದೊಂದಿಗೆ 9್ಢ4 ಅಳತೆಯ, ರು. 5ರ ಅಂಚೆ ಚೀಟಿ ಹಚ್ಚಿದ ಸ್ವವಿಳಾಸದ ಲಕೋಟೆಯೊಂದಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-1), ಮೀನುಗಾರಿಕೆ ಕೇಂದ್ರ, ಬಿ.ಆರ್. ಪ್ರಾಜೆಕ್ಟ್ , ಭದ್ರಾವತಿ ತಾಲೂಕು, ಶಿವಮೊಗ್ಗ ಜಿಲ್ಲೆ - ಈ ವಿಳಾಸಕ್ಕೆ ಪತ್ರ ಬರೆಯಬಹುದು. ಮೀನುಗಾರಿಕೆ ಕಚೇರಿಗಳಲ್ಲಿ ಅರ್ಜಿ ಪಡೆದು ಮೇ 25ರೊಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

