ಗಜೇಂದ್ರಗಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ
ಗಜೇಂದ್ರಗಡ: ವಿಧಾಸಭೆ ಚುನಾವಣೆಯಲ್ಲಿ ರೋಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ್ ಗೆಲುವು ಸಾಧಿಸಿದ ಸುದ್ದಿ ಪಟ್ಟಣದಲ್ಲಿ ಹರಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಸ್ಥಳೀಯ ಟಿಟಿಡಿ ಕಲ್ಯಾಣ ಮಂಟಪದ ಬಳಿ ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ, ಮಾಜಿ ಸಂಸದ ಆರ್.ಎಸ್. ಪಾಟೀಲ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಕೆ.ಕೆ. ವೃತ್ತ, ಜೋಡುವೃತ್ತ, ದುರ್ಗಾ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಜಯಘೋಷದೊಂದಿಗೆ ಮೆರವಣಿಗೆ ನಡೆಸಿ ಸಂಭ್ರಮಿಸಿದರು. ಬಳಿಕ ಮಾತನಾಡಿದ ಆರ್.ಎಸ್.ಪಾಟೀಲ್, ಜನರು ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ಜವಾಬ್ದಾರಿ ಹೊತ್ತವರು. ಜನವಿರೋಧಿ ನೀತಿ ಅನುಸರಿಸುವವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಚಂಬಣ್ಣಾ ಚವಡಿ, ಮೋಹನಸಾ ರಾಯಬಾಗಿ, ವಿಶ್ವನಾಥಸಾ ಮೇಘರಾಜ, ಅಜಿತ್ ಬಾಗಮಾರ, ಪುರಸಭೆ ಸದಸ್ಯ ಶಿವರಾಜ ಘೋರ್ಪಡೆ, ಶ್ರೀಕಾಂತ ಅವಧೂತ, ದತ್ತುಸಾ ಬಾಕಳೆ, ಗಿರೀಶ ರಂಗ್ರೇಜ, ರಾಮಣ್ಣ ಮೇಘರಾಜ, ನಾಗೂಸಾ ಬಸವಾ, ವೆಂಕಟೇಶ ಮುದ್ಗಲ್, ಸುರೇಶ ಚವಡಿ, ಶರಣಪ್ಪ ಕೊಟಗಿ, ಕೊಟ್ರೇಶ ಚಿಲಕಾ, ಸಿದ್ಧಾರೂಢ ನಂದನ್ ಜವಳೆಕರ್, ಯಾಸೀನ ಮಾರನಬಸರಿ, ಮುರ್ತುಜಾ ಡಾಲಾಯತ್, ಸುಭಾನಸಾಬ ಆರಗಿದ್ದ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

