ಜನತೆ ತೀರ್ಪು ಸ್ವಾಗತಿಸುತ್ತೇವೆ: ದಂಡಿನ
ನರಗುಂದ: ನರಗುಂದ ಕ್ಷೇತ್ರದ ಜನತೆ ಬಿಜೆಪಿಯನ್ನು ತಿರಸ್ಕಾರ ಮಾಡಿ ಕಾಂಗ್ರೆಸ್ನ್ನು ಬೆಂಬಲಿಸಿದ್ದನ್ನು ಸ್ವಾಗತಿಸುತ್ತೇವೆ ಎಂದು ನರಗುಂದ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಚಂದ್ರು ದಂಡಿನ ಹೇಳಿದರು.
ಅವರು ಗುರುವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 5 ವರ್ಷದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನರಿಗೆ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡು ನಮ್ಮ ಪಕ್ಷ ಜನರ ಮೂಲ ಸೌಲಭ್ಯಗಳಿಗೆ ಶ್ರಮಿಸಿದ. ಈ ಕ್ಷೇತ್ರದಲ್ಲಿ ಮಾಜಿ ಶಾಸಕ ಸಿ.ಸಿ. ಪಾಟೀಲರು ತಮ್ಮ ಅಧಿಕಾರದ ಅವಧಿಯಲ್ಲಿ ರು. 850 ಕೋಟಿ ತಂದು ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನಾಯಕರ ಸ್ವಲ್ಪ ಮಟ್ಟಿನ ಗೊಂದಲಗಳಿಂದ ಪಕ್ಷದ ವರ್ಚಸ್ಸಿಗೆ ದಕ್ಕೆ ಬಂತು. ಹೀಗಾಗಿ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಲೆ ಬೀಸಿದ್ದರಿಂದ ನಮ್ಮ ಶಾಸಕರು ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ ಜನತೆ ಬದಲಾವಣೆ ಬಯಸಿ ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂದರು. ಉಮೇಶಗೌಡ ಪಾಟೀಲ ಮಾತನಾಡಿ, ನಮ್ಮ ತಂದೆ ಸಿ.ಸಿ. ಪಾಟೀಲರು ಅನುಪಸ್ಥಿತಿಯಲ್ಲಿ ಕ್ಷೇತ್ರದ ಮತದಾರರು 50 ಸಾವಿರಕ್ಕಿಂತ ಹೆಚ್ಚು ಮತದಾನ ಮಾಡಿ ನಮ್ಮನ್ನು ಬೆಂಬಲಿಸಿದ್ದಕ್ಕೆ ಕ್ಷೇತ್ರದ ಜನತೆಗೆ ನಮ್ಮ ಕುಟುಂಬದ ಪರವಾಗಿ ಹೃತಪೂರ್ವಕ ಅಭಿನಂದನೆಗಳು. ಈ ಚುನಾವಣೆಯಲ್ಲಿ ನಮ್ಮ ತಂದೆ ಆಯ್ಕೆಯಾಗಬೇಕಿತ್ತು. ಆದರೆ, ವಿರೋಧ ಪಕ್ಷಗಳು ಮತದಾನಕ್ಕೆ 2 ದಿನ ಮುನ್ನ ತಂದೆಯವರ ಆರೋಗ್ಯದ ಬಗ್ಗೆ ಜನರಲ್ಲಿ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ತಿಳಿಸಿ ತಮ್ಮತ್ತ ಮತದಾರರನ್ನು ಸೆಳೆದುಕೊಂಡಿದ್ದರಿಂದ ನಾವು ಈ ಚುನಾವಣೆಯಲ್ಲಿ ಸೋಲಬೇಕಾಯಿತು. ಈ ತೀರ್ಪಿಗೆ ನಾವು ತೆಲೆಬಾಗುತ್ತೇವೆ. ನೂತನ ಶಾಸಕರಾಗಿ ಆಯ್ಕೆಯಾದ ಬಿ.ಆರ್. ಯಾವಗಲ್ರಿಗೆ ಅಭಿನಂದಿಸುವುದಾಗಿ ತಿಳಿಸಿದರು. ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಸಿ.ಎಸ್. ಪಾಟೀಲ, ಜಿ.ಬಿ. ಕುಲಕರ್ಣಿ, ವಾಸು ಜೋಗಣ್ಣವರ, ರಾಜುಗೌಡ ಪಾಟೀಲ, ಶಿವಾನಂದ ಮುತ್ತವಾಡ, ಬಿ.ಎಸ್. ಉಪ್ಪಾರ, ಬಿ.ಎಸ್. ಪಾಟೀಲ, ಪ್ರಕಾಶ ಪಟ್ಟಣಶಟ್ಟಿ, ಚಂದ್ರಶೇಖರ ಕೋಟಿ, ವಿ.ಎನ್. ಕೊಳ್ಳಿಯವರ, ಉಮೇಶ ಯಮೋಜಿ, ಪರಶುರಾಮ ಜಂಬಗಿ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

