ಗದಗ

ಶಿರಹಟ್ಟಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಮೇ 9
ಈ ಭಾಗದ ರೈತರ ಕನಸಾಗಿರುವ ಶಿಂಗಟಾಲೂರು ಹುಲಿಗುಡ್ಡ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಮುಂದಿನ 5 ವರ್ಷದ ಅವಧಿಯಲ್ಲಿ ಸಂಪೂರ್ಣಗೊಳಿಸಿ, ರೈತರ ಹೊಲಗಳಿಗೆ ನೀರು ಹರಿಸುವ ಮೂಲಕ ಶಿರಹಟ್ಟಿ ಮೀಸಲು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಿರಹಟ್ಟಿ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಗುರುವಾರ ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನನ್ನ ಕ್ಷೇತ್ರದಲ್ಲಿ ಬರುವ ಎಲ್ಲ ಪಟ್ಟಣಗಳಿಗೆ ಹಾಗೂ ಎಲ್ಲ ಗ್ರಾಮಗಳಿಗೆ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸುವುದಾಗಿ ತಿಳಿಸಿ, ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಮಹಿಳಾ ಶೌಚಾಲಯದ ಕೊರತೆ ಇದ್ದು, ಅಂತಹ ಗ್ರಾಮಗಳನ್ನು ಗುರುತಿಸಿ ಎಲ್ಲ ಗ್ರಾಮಗಳಿಗೆ ಮಹಿಳಾ ಶೌಚಾಲಯ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು.
ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಸೂರಿಲ್ಲದವರಿಗೆ ಒಂದೇ ಒಂದು ಆಶ್ರಯ ಮನೆ ನೀಡಲಿಲ್ಲ. ತಾವು ಈ ಕೂಡಲೇ ಅದಕ್ಕೆ ಬೇಕಾದ ಜಮೀನನ್ನು ಕೊಂಡುಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಮನೆ ಇಲ್ಲದ ಕಟ್ಟಡ ಕಾರ್ಮಿಕರಿಗೆ, ಯಕ್ಕಾಗಾಡಿ ಕಾರ್ಮಿಕರಿಗೆ, ಹಮಾಲಿ ಕಾರ್ಮಿಕರಿಗೆ, ಪೌರ ಕಾರ್ಮಿಕರಿಗೆ ಹಾಗೂ ಮನೆಯಿಲ್ಲದ ಎಲ್ಲರಿಗೂ ಮನೆ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈಗಿರುವ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಜನ ಸಾಮಾನ್ಯರಿಗೆ ಉತ್ತಮ ಚಿಕಿತ್ಸೆ ಕೊಡಿಸುವುದು, ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ಪಟ್ಟಣಗಳಲ್ಲಿ ಮಕ್ಕಳಿಗಾಗಿ ಉದ್ಯಾನಗಳ ನಿರ್ಮಾಣ, ಮಾಗಡಿ ಕೆರೆಯನ್ನು ಪಕ್ಷಿ ಧಾಮವನ್ನಾಗಿ ಮಾಡುವುದು, ಕಪ್ಪತ್ತಡ್ಡವನ್ನು ರಕ್ಷಿಸಿ ಅದಕ್ಕಾಗಿ ವಿಶೇಷ ಯೋಜನೆ ರೂಪಿಸುವುದಾಗಿ ತಿಳಿಸಿದರು.  
ಕ್ಷೇತ್ರದ ಜನತೆ ಬರಗಾಲದಲ್ಲಿ ಕೆಲಸಕ್ಕಾಗಿ ಬೇರೆಡೆ ಗುಳೇ ಹೋಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರದ ರಾಷ್ಟ್ರೀಯ ಉದ್ಯೋಗ ಕಾತ್ರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಎಲ್ಲರಿಗೂ ಕೆಲಸ ಹಾಗೂ ಕೂಲಿ ದೊರೆಯುವಂತೆ ಮಾಡಲಾಗುವುದು.ಎಚ್.ಕೆ. ಪಾಟೀಲ, ಡಿ.ಆರ್. ಪಾಟೀಲ, ಜಿ.ಎಸ್.ಪಾಟೀಲ, ಬಿ.ಆರ್. ಯಾವಗಲ್, ಜಿಲ್ಲಾಧ್ಯಕ್ಷ ಜಿ.ಎಸ್. ಗಡ್ಡದೇವರಮಠ, ತಾಲೂಕು ಅಧ್ಯಕ್ಷ ಹೇಮಂತಗೌಡ ಪಾಟೀಲ, ವಿ.ಎಲ್. ನಾಡಗೌಡ್ರ, ಹೊಳಲಾಪುರ ವಕೀಲರು, ವೀರಣ್ಣ ಅಂಗಡಿ ಹಾಗೂ ಎಲ್ಲ ಹಿರಿಯ ಕಾಂಗ್ರೆಸ್ಸಿಗರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೊಟ್ರೇಶ ಅಂಗಡಿ, ವಿಜಯಕುಮಾರ ಶಿಳ್ಳೀನ, ಡಾ. ಬಸವರಾಜ ಮೇಟಿ, ರವೀಂದ್ರ ಉಪ್ಪಿನ ಬೆಟಗೇರಿ, ಚಂದ್ರಹಾಸ ಉಳ್ಳಾಗಡ್ಡಿ, ಬಸವರಾಜ ಬಿಸನಳ್ಳಿ, ಎ.ಪಿ. ದಂಡೀನ, ಶರಣಪ್ಪ ಕುಬಸದ, ರಾಮಣ್ಣ  ಬಳ್ಳಾರಿ, ರಾಮು ಕಲಾಲ, ಎಸ್.ಡಿ. ಮಕಾಂದಾರ, ಪ್ರಕಾಶ ಹಾರೋಗೇರಿ, ರಾಘವೇಂದ್ರ ಕುರಿ, ರಾಮು ಭಜಂತ್ರಿ, ಅಬ್ದುಲ್ ಖುರೇಷಿ, ಲಿಂಗರಾಜಗೌಡ ಪಾಟೀಲ, ಡಿ.ಡಿ. ಮೋರನಾಳ, ಸೊಲಬಣ್ಣ ಜೋಬಾಳಿ, ಪಾಲಾಕ್ಷಿ ಗಣದಿನ್ನಿ, ನಾಗೇಶ ಹುಬ್ಬಳ್ಳಿ, ಭೀಮಣ್ಣ ಆರೇರ, ಬಿ.ವಿ. ಮುದ್ದಿ, ಧೃವಕುಮಾರ ಹೊಸಮನಿ, ಶೇಖರಾಜ ಹೊಸಮನಿ, ಶೇಖರ ಜುಟ್ಲನ್ನವರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.