ನಿರಂತರ ಹೋರಾಟಕ್ಕೆ ಸಿದ್ದುಗೆ ಸಿಎಂ ಸ್ಥಾನ
ಗದಗ: ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ ರಾಜ್ಯದ ಜನರಿಗಾಗಿ ಮೂರು ದಶಕಗಳು ನಿರಂತರವಾಗಿ ಹೋರಾಡಿದ ಪ್ರತಿಫಲವೇ ಮುಖ್ಯಮಂತ್ರಿಯಾಗಿ ಕರ್ನಾಟಕ ಮುನ್ನಡೆಸುವ ಸುವರ್ಣ ಅವಕಾಶ ಸಿಕ್ಕಿದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ, ಗದಗ ಕನಕದಾಸ ಶಿಕ್ಷಣ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ. ಬಿ.ಎಫ್. ದಂಡಿನ ಅಭಿಪ್ರಾಯಪಟ್ಟರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯ ಎಲ್ಲ ವರ್ಗಗಳನ್ನು ಸಮಾನತೆಯಿಂದ ಕಾಣುವ, ಅಭಿವೃದ್ಧಿ ಬಯಸುವ ಧೀಮಂತ ನಾಯಕ. ಆರ್ಥಿಕ ಪರಿಣಿತಿ ಹೊಂದಿದ ಅವರು ಸುಭದ್ರ ಅರ್ಥವ್ಯವಸ್ಥೆ ತರುವ ಸಾಮರ್ಥ್ಯ ಹೊಂದಿದ್ದಾರೆ. ಹಳ್ಳಿ ಜನರು, ಬಡವರು, ಅಲ್ಪಸಂಖ್ಯಾತರು, ಹಿಂದುಳಿದವರು, ರೈತರ ಪರವಾದ ದೂರದೃಷ್ಟಿವುಳ್ಳ ಶುದ್ಧ ಹಸ್ತದ ರಾಜಕಾರಣಿ.
ಅವರು 1983ರಲ್ಲಿ ಶಾಸಕರಾಗಿ ಆಯ್ಕೆಯಾಗಿ, ಮೂರು ಬಾರಿ ಹಣಕಾಸು ಸಚಿವರಾಗಿ, ಎರಡು ಬಾರಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಬಿಜೆಪಿಯ ದುರಾಡಳಿತ, ಅಕ್ರಮ ಗಣಿಗಾರಿಕೆ ವಿರುದ್ಧ ಜನಾಂದೋಲನ ರೂಪಿಸಿದ್ದರು. ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿದೆ. ಈ ದಿಸೆಯಲ್ಲಿ ಸುಭದ್ರ, ಸ್ಥಿರ ಸರ್ಕಾರ ನೀಡಲು ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

