ಗದಗ

ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Published On :

ಗದಗ: ಧಾರವಾಡ ನಗರದ ಸಪ್ತಾಪುರ ರಸ್ತೆಯ ಉದಯ ಹಾಸ್ಟೆಲ್ ವೃತ್ತದ ಸಮೀಪದಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2013-14ನೇ ಶೈಕ್ಷಣಿಕ ವರ್ಷಕ್ಕಾಗಿ ಧಾರವಾಡ, ಗದಗ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಯಲ್ಲಿರುವ ಯುದ್ಧದಲ್ಲಿ ಮಡಿದ ಯೋಧರ ಹಾಗೂ ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಮೆಟ್ರಿಕ್ ಮತ್ತು ಮೆಟ್ರಿಕ್ ಪೂರ್ವ (5ರಿಂದ 10ನೇ ತರಗತಿ) ವಸತಿ ನಿಲಯದಲ್ಲಿ ಉಚಿತ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶದ ಅವಧಿ ಒಂದು ವರ್ಷ. ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಸಿಕ್ಕರೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಧಾರವಾಡ (ದೂ. 0836 2440176) ಇವರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.