ತರಬೇತಿಗೆ ಆಹ್ವಾನ
ಗದಗ: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ಜೂ. 1ರಿಂದ 10 ತಿಂಗಳ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುವುದು. ಮೇ 15ರಿಂದ 25ರ ವರೆಗೆ ಅರ್ಜಿ ವಿತರಿಸಲಾಗುವುದು. ಮೇ 25ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು. ಮೇ 28ರಂದು ಬೆಳಗ್ಗೆ 10 ಗಂಟೆಗೆ ನಗರದ ಭೀಷ್ಮ ಕೆರೆಯ ಹತ್ತಿರದ ತೋಟಗಾರಿಕೆ ಉಪನಿರ್ದೇಶಕರ (ಜಿಪಂ) ಕಚೇರಿಯಲ್ಲಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಹೆತ್ತವರು ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ಸಲ್ಲಿಸುವುದು ಕಡ್ಡಾಯ. ಸಾಮಾನ್ಯ ಅಭ್ಯರ್ಥಿಗಳಿಗೆ ರು. 10 ಮತ್ತು ಪರಿಶಿಷ್ಟ ಜಾತಿ-ಪಂಗಡದ ಅಭ್ಯರ್ಥಿಗೆ ರು. 5 ಅರ್ಜಿ ಶುಲ್ಕ ನಿಗದಿಪಡಿಸಿದೆ. ವಿವರಗಳಿಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ತಾಲೂಕು ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

