ಬಸವಣ್ಣನವರ ತತ್ವಗಳು ಪ್ರಸ್ತುತ: ಹೂಲಿ
ಕನ್ನಡಪ್ರಭ ವಾರ್ತೆ, ಗದಗ, ಮೇ 14
ಸಮಾನತೆಯ ಹರಿಕಾರ, ವಿಶ್ವಮಾನವ, ವಿಶ್ವಗುರು ಬಸವಣ್ಣನವರ ತತ್ವ ಸಿದ್ಧಾಂತಗಳು, ಅವರ ಶೋಷಣೆ ಮುಕ್ತ ಸಮಾಜದ ನಿರ್ಮಾಣದ ಕನಸು, 12ನೇ ಶತಮಾನದಲ್ಲಿಯೇ ಮಾಡಿದ ಕ್ರಾಂತಿಕಾರಕ ಬದಲಾವಣೆಗಳು ಇಂದಿಗೂ ನೆನಪಿನಲ್ಲಿಡುವಂತಗಳಾಗಿದ್ದು, ಅವರ ವಿಚಾರಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಜಿಲ್ಲಾ ಡಿಎಸ್ಎಸ್ ನಾಯಕ ಸತೀಶ ಹೂಲಿ ಹೇಳಿದರು.
ಅವರು ಸೋಮವಾರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗದಗ ತಾಲೂಕು ಶಾಖೆಯ ವತಿಯಿಂದ ಹಮ್ಮಿಕೊಂಡ ಬಸವಣ್ಣವರ 880ನೇ ಜಯಂತಿ ಹಾಗೂ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇವನಾರವ, ಇವನಾರವ, ಎಂದೇನಿಸದೆ ಇವ ನಮ್ಮವ ಇವ ನಮ್ಮವ ಎನ್ನುವಂತ ಅದ್ಭುತವಾದ ಮಾನವೀಯ ಮೌಲ್ಯಗಳ ನಿಧಿಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಬಸವಣ್ಣನವರು ಸಮಾಜದಲ್ಲಿನ ಜಾತಿ, ಬೇಧ, ಭಾವವನ್ನು ಹೋಗಲಾಡಿಸಲಿ. ಎಲ್ಲರಲ್ಲಿಯೂ ಸಮಾತನೆಯನ್ನು ಬೆಳೆಸುವಲ್ಲಿ ಪ್ರಾಮಾಣಿಕರಾಗಿ ಶ್ರಮಿಸಿದ್ದು, ಇಂಥಹ ಮಹಾನ್ ವ್ಯಕ್ತಿ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.
ಅತಿಥಿಗಳಾಗಿ ಆಗಮಿಸಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಸ್.ಎನ್. ಬಳ್ಳಾರಿ ಮಾತನಾಡಿ, ಬಸವಣ್ಣನವರ ವಿಚಾರಗಳು ಅವರ ಜೀವನ ಚರಿತ್ರೆ ಕುರಿತು ಮಾರ್ಮಿಕವಾಗಿ ತಿಳಿಸಿ ಬುದ್ಧ-ಬಸವ-ಅಂಬೇಡ್ಕರವರ ವಿಚಾರಗಳು ಸಮಾನತೆಗಾಗಿ ತಳಪಾಯ ಹಾಕಲು ಪ್ರಯತ್ನಿಸಿದಂತವುಗಳಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಂಚಾಲಕ ಮಾರುತಿ ಗುಡಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಸವೇಶ್ವರರ ಆದರ್ಶಗಳನ್ನು ಪಾಲಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಪರಶುರಾಮ ಪೂಜಾರ, ಯುವರಾಜ ಬಳ್ಳಾರಿ, ರವಿ ಹಾದಿಮನಿ ಮುಂತಾದವರು ಉಪಸ್ಥಿತರಿದ್ದರು.
ಸಂತೋಷ ಬಳ್ಳಾರಿ ಸ್ವಾಗತಿಸಿದರು. ವಿನಾಯಕ ಬಳ್ಳಾರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

