ಗದಗ

ಭವ್ಯ ಮೆರವಣಿಗೆ, ಕುಂಭಮೇಳ

Published On :

ಗದಗ: ತಾಲೂಕಿನ ಕೋಟುಮಚಗಿ ಗ್ರಾಮದ ಗ್ರಾಮದೇವತೆಯ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣದ ಅಂಗವಾಗಿ ಮಂಗಳವಾರ ದೇವಿಯ ಧ್ವಜಾರೋಹಣ ಹಾಗೂ ಕುಂಭಮೇಳ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ದೇವಸ್ಥಾನದ ಆವರಣದಲ್ಲಿ ಧ್ವಜಾರೋಹಣವು ಹರ-ಚರ-ಗುರು ಶ್ರೀಗಳ ನೇತೃತ್ವದಲ್ಲಿ ಜರುಗಿತು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ ಹಾಗೂ ಕುಂಭಮೇಳವು ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಗಂಗಾಧರಯ್ಯ ಹಿರೇಮಠ, ಗ್ರಾಪಂ ಅಧ್ಯಕ್ಷೆ ಸುಮಂಗಲಾ ಜಗ್ಗಲ, ಎಪಿಎಂಸಿ ಸದಸ್ಯ ರಾಮಣ್ಣ ಶಿಂಗ್ಟಾಲಕೇರಿ. ಹುಚ್ಚೀರಪ್ಪ ಬಡಿಗೇರ, ಗ್ರಾಪಂ ಸದಸ್ಯ ದೇವಪ್ಪ ಬಡಿಗೇರ, ಮುಡಿಯಪ್ಪ ಜಗ್ಗಲ, ಮಾಜಿ ಸೈನಿಕ ಎಂ.ಜಿ. ಪಾಟೀಲ, ಸಿದ್ದಯ್ಯ ಭೂಸನೂರಮಠ, ಬಸವರಾಜ ಸಂಕನಗೌಡ್ರ, ಶಿವಣ್ಣ ಶಿಂಗ್ಟಾಲಕೇರಿ, ಮುತ್ತಣ್ಣ ನೀರಲಗಿ, ಸಂಗಪ್ಪ ಗೋಧಿ, ಮಾನಪ್ಪ ಬಡಿಗೇರ, ಈರಪ್ಪ ತಳವಾರ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.