ನೈತಿಕ ಮೌಲ್ಯ ಅಳವಡಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಮೇ 15
ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದ ಏಳ್ಗೆಗಾಗಿ ಶ್ರಮಿಸಿದಾಗ ಮಾತ್ರ ಜೀವನದ ಸಾರ್ಥಕತೆ ಎಂದು ಧಾರವಾಡ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಮೋಹನಕುಮಾರ ಅಭಿಪ್ರಾಯಪಟ್ಟರು.
ಈಚೆಗೆ ಪಟ್ಟಣದಲ್ಲಿ ಜರುಗಿದ ಕಮಲಾ ಮತ್ತು ವೆಂಕಪ್ಪ ಎಂ. ಅಗಡಿ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ವಾಕ್ಮಯ-2013 ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಾವು ಕಲಿತ ಸಂಸ್ಥೆ ಮತ್ತು ಶಿಕ್ಷಕರ ಬಗ್ಗೆ ಗೌರವ ಪೂಜ್ಯತಾ ಭಾವ ಹೊಂದಿದಾಗ ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವಾರ್ಷಿಕ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಡಾ. ಅಶೋಕ ಚಾಪಗಾಂವ್, ಮಹಾವಿದ್ಯಾಲಯದ ಪ್ರಗತಿಯ ಮುನ್ನೋಟವಾದ ವಾರ್ಷಿಕ ವರದಿ ವಾಚಿಸಿದರು. ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಜರುಗಿದ ಸಾಂಸ್ಕೃತಿಕ ಚಟುವಟಿಕೆ ಹಾಗೂ ಕ್ರೀಡೆಯಲ್ಲಿ ಯಶಸ್ಸು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಬಹುಮಾನ ನೀಡಲಾಯಿತು. ಸಂಸ್ಥೆಯ ನಿರ್ದೇಶಕ ಡಾ. ಅರುಣ ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಚಾರ್ಯ ಡಾ. ಎಸ್.ವಿ. ಗೋರಬಾಳ ಸ್ವಾಗತಿಸಿದರು. ಯಶೋಧಾ ಬೀಳಗಿ, ಶೃತಿ ಇನಾಮದಾರ ನಿರೂಪಿಸಿದರು. ಡಾ. ಎನ್. ಹಯವದನ ವಂದಿಸಿದರು. ನಂತರ ಮಹಾವಿದ್ಯಾಲಯದ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

