ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ದೊಡ್ಡಮನಿ
ಮುಂಡರಗಿ: ಚುನಾವಣೆಯಲ್ಲಿ ವಿಜಯಶಾಲಿಯಾಗಲೆಂದು ಈ ಭಾಗದ ನಡೆದಾಡುವ ದೇವರಾಗಿರುವ ನಾಡೋಜ ಡಾ. ಅನ್ನದಾನೀಶ್ವರ ಮಹಾ ಸ್ವಾಮಿಗಳು ಆಶೀರ್ವಾದ ಮಾಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಿರಹಟ್ಟಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಗುರುವಾರ ಬೆಳಗ್ಗೆ ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ರು. 1.14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಯಾತ್ರಿ ನಿವಾಸ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ತಮ್ಮ ಅಧಿಕಾರದ ಅವಧಿಯಲ್ಲಿ ಎಲ್ಲ ಜನತೆಗೆ ವಸತಿ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸಿಕೊಂಡಿದ್ದು, ಶ್ರೀಗಳ ಆಶಿರ್ವಾದದಿಂದ ಎಲ್ಲ ಕಾರ್ಯಗಳನ್ನು ಮಾಡುವುದಾಗಿ ತಿಳಿಸಿದರು.
ಪ್ರಾಚಾರ್ಯ ಎಸ್.ಬಿ. ಕರಿಭರಮಗೌಡ್ರ ಮಾತನಾಡಿದರು. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮಿಗಳು ಮಾತನಾಡಿ, ಹಿಂದಿನ ಜಿಲ್ಲಾಧಿಕಾರಿ ಎಸ್. ಶಂಕರನಾರಾಯಣ ಪ್ರಯತ್ನದಿಂದ ಪ್ರವಾಸೋದ್ಯಮ ಇಲಾಖೆ ಈ ಕಟ್ಟಡಕ್ಕೆ ಹಣ ಮಂಜೂರು ಮಾಡಿದ್ದು, ಶಂಕರನಾರಾಯಣ ಅವರನ್ನು ಅಭಿನಂದಿಸುವುದಾಗಿ ಹೇಳಿದರು.
ಜಾತ್ರಾ ಕಮಿಟಿ ಅಧ್ಯಕ್ಷ ಮಂಜುನಾಥ ಗೋಡಿ, ಶಂಕ್ರಪ್ಪ ಬಾರಿಕಾಯಿ, ಪುರಸಭೆ ಸದಸ್ಯರಾದ ವಿರೇಶ ಸಜ್ಜನರ, ಬಸವರಾಜ ರಾಮೇನಹಳ್ಳಿ, ಫಕ್ರುದ್ದೀನ ಹಾರೋಗೇರಿ, ಬಸವರಾಜ ಬಿಸನಳ್ಳಿ, ಗ್ಯಾಣಪ್ಪ ಶೀರಿ, ವಿಜಯ ಕೊಪ್ಪಳ, ಶ್ಯಾಂ ಹಾರೋಗೇರಿ, ಹನಮಂತಪ್ಪ ಗಡ್ಡದ, ಲ್ಯಾಂಡ್ ಆರ್ಮಿ ಇಲಾಖೆ ಅಧಿಕಾರಿ ಆರ್.ಎಸ್. ಮಾಳದಕರ್, ಸಿ.ಎಸ್. ಚಕ್ಕಡಿಮಠ, ಚನ್ನವೀರಯ್ಯ ಹಿರೇಮಠ, ಎಸ್.ಬಿ. ಹಿರೇಮಠ, ಅಡಿವೆಪ್ಪ ಕಟ್ಚಿಮನಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

