ವಸತಿ ನಿಲಯಕ್ಕೆ ಅರ್ಜಿ ಆಹ್ವಾನ
ಮುಂಡರಗಿ: 2013-14ನೇ ಸಾಲಿಗೆ ಮುಂಡರಗಿ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್‌ಪೂರ್ವ ಬಾಲಕ-ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 5 ರಿಂದ 10 ನೇ ತರಗತಿಗೆ ಹೊಸದಾಗಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
5ರಿಂದ 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ದಿ. ಶಾಂತಾಬಾಯಿ ರಾಮಣ್ಣ ನಾಯ್ಕ (ಸಾಹುಕಾರ) ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮುಂಡರಗಿ, ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಮುಂಡರಗಿ, ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕಲಕೇರಿ, ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಬಾಗೇವಾಡಿ, ಸರ್ಕಾರಿ ಸಾರ್ವಜನಿಕ ಮೆಟ್ರಿಕ್‌ಪೂರ್ವ ಬಾಲಕರ ವಸತಿ ನಿಲಯ ಡಂಬಳ ಗ್ರಾಮಗಳಲ್ಲಿರುವ ವಸತಿ ನಿಲಯಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ನಿಲಯಗಳಿಗೆ ಪ್ರವೇಶ ಕೋರಿ ಬಂದ ವಿದ್ಯಾರ್ಥಿಗಳ ಅರ್ಜಿಗಳನ್ನು ತಾಲೂಕು ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಶೇ 75 ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ 25ರಷ್ಟು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ಉಪಹಾರ, ವಸತಿ ಸೌಕರ್ಯದ ಜತೆಗೆ ಶಿಕ್ಷಣ ಸೌಲಭ್ಯ. ಉಡುಪು, ಹಾಸಿಗೆ, ಹೊದಿಕೆ, ಪಠ್ಯ ಪುಸ್ತಕ ಹಾಗೂ ಇನ್ನಿತರೆ ಸೌಲಭ್ಯ ನೀಡಲಾಗುವುದು.
ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 10, 2013 ಕೊನೆಯ ದಿನವಾಗಿದೆ. ಪ್ರವೇಶ ಪಡೆಯಲಿಚ್ಚಿಸುವ ಪರಿಶಿಷ್ಟ-ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯದಿಂದ ಅರ್ಜಿ ನಮೂನೆಗಳನ್ನು ಪಡೆದು ಅರ್ಜಿ ಸಲ್ಲಿಸುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

