ಸುದ್ದಿ ಸಂಕ್ಷೇಪ
ವಾಹನದಿಂದ ಬಿದ್ದು ಓರ್ವ ಸಾವು
ಗದಗ: ಟಂಟಂ ವಾಹನವು ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಓರ್ವ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ಜಿಲ್ಲೆಯ ರೋಣ-ನವಲಗುಂದ ರಸ್ತೆಯ ದುರ್ಗಮ್ಮನ ಗುಡಿ ಹತ್ತಿರ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನು ಬಸಪ್ಪ ದುರ್ಗಪ್ಪ ಬೇಲೇರಿ (40) ಎಂದು ಗುರುತಿಸಲಾಗಿದೆ. ರೋಣದಿಂದ ನವಲಗುಂದ ಕಡೆಗೆ ಅತಿ ವೇಗವಾಗಿ ಟಂಟಂ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ವಾಹನದಿಂದ ಕೆಳಗೆ ಬಿದ್ದ ಬಸಪ್ಪನನು ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತಿ ವಿಷ ಸೇವನೆ: ಪತಿ ನೇಣಿಗೆ ಶರಣು
ಗದಗ: ಹೆಂಡತಿಯು ವಿಷ ಸೇವಿಸಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಇದರಿಂದ ಮಾನಸಿಕ ಮಾಡಿಕೊಂಡು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಮೃತಪಟ್ಟವನನು ನಗರದ ನಿವಾಸಿ ಅಶೋಕ ನಾಗಪ್ಪ ಕುರ್ತಕೋಟಿ (28) ಎಂದು ಗುರುತಿಸಲಾಗಿದ್ದು, ಹೆಂಡತಿ ವಿಷ ಸೇವಿಸಿದ ಹಿನೆಲೆಯಲ್ಲಿ ಮಾನಸಿಕಗೊಂಡ ಅಶೋಕ ನಗರದ ಹೊರವಲಯದ ಜಮೀನು ಒಂದರಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತಿ ಬುದ್ಧಿ ಹೇಳಿದ್ದಕ್ಕೆ ಪತಿ ಆತ್ಮಹತ್ಯೆ
ಗದಗ: ದುಡಿಯಲಾರದೇ ಸಾರಾಯಿ ಕುಡಿದು ಮನೆಗೆ ಬರುತ್ತಿದ್ದ ಪತಿರಾಯನಿಗೆ ಪತಿ ಬುದ್ಧಿ ಹೇಳಿದ್ದಕ್ಕೆ ಮಾನಸಿಕಗೊಂಡು ಪತಿರಾಯ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟಗೇರಿಯ ಮಂಜುನಾಥ ನಗರದ ಕಣವಿ ಪ್ಲಾಟ್ನಲ್ಲಿ ಶುಕ್ರವಾರ ನಡೆದಿದೆ. ಮೃತನನು ಆಸೀಫ್ ಆಹ್ಮದಸಾಬ ಬಾಗೋಡಿ (35) ಎಂದು ಗುರುತಿಸಲಾಗಿದೆ. ಮೃತನ ಹೆಂಡತಿ ದುಡಿಯಲು ಹೋಗು ಅಂತಾ ಬುದ್ಧಿವಾದ ಹೇಳಿದ್ದಕ್ಕೆ ನೊಂದುಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ವಿದ್ಯುತ್ ವ್ಯತ್ಯಯ
ಗದಗ: ಮೇ 18 ರಂದು 110 ಕೆವಿ ಕೊಣ್ಣೂರ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಣ್ಣೂರು ಉಪ ಕೇಂದ್ರದಿಂದ ಪೂರೈಕೆಯಾಗುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

