ಯಾವ ಸದಸ್ಯರೂ ಬಿಜೆಪಿ ತೊರೆಯುವುದಿಲ್ಲ: ಬಂಡಿ
ಗಜೇಂದ್ರಗಡ: ಪಟ್ಟಣದ ಪುರಸಭೆಗೆ ಆಯ್ಕೆಯಾದ ಬಿಜೆಪಿಯ 17 ಸದಸ್ಯರಲ್ಲಿ ಕೆಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆಂದು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಗಾಳಿ ಸುದ್ದಿ ಹಬ್ಬಿಸಿ ಪಕ್ಷದ ಘನತೆಗೆ ಅಗೌರವ ತರಲು ಯತ್ನಿಸಲಾಗಿದೆ ಎಂದು ಬಿಜೆಪಿ ಸದಸ್ಯ ಸಿದ್ಧಪ್ಪ ಬಂಡಿ ಹೇಳಿದರು.
ಅವರು ಶುಕ್ರವಾರ ಸ್ಥಳೀಯ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ನ ಕೆಲ ಮುಖಂಡರು ಪುರಸಭೆ ಆಡಳಿತವನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಪಟ್ಟಣದಲ್ಲಿ ವದಂತಿ ಹರಡಿಸಿ ಪುರಸಭೆ ಗದ್ದುಗೆಯ ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿಯಿಂದ ಆಯ್ಕೆಯಾದ ಎಲ್ಲ 17 ಸದಸ್ಯರೂ ಒಗ್ಗಟ್ಟಾಗಿದ್ದೇವೆ. ಪಕ್ಷಕ್ಕೆ ದ್ರೋಹವೆಸಗುವ ಕೆಲಸಕ್ಕೆ ಕೈಹಾಕುವುದಿಲ್ಲ. ರಾಜಕಾರಣದಲ್ಲಿ ಸೋಲು, ಗೆಲವು ಸಹಜ. ಆದರೆ ಬಿಜೆಪಿ ಸದಸ್ಯರಲ್ಲಿ ಗೊಂದಲ ಸೃಷ್ಟಿಸಲು ಸಂಚು ಹೂಡಿದವರಿಗೆ ನಿರಾಶೆ ಕಾದಿದೆ. ಮಾಜಿ ಸಚಿವ ಕೆ.ಜಿ. ಬಂಡಿಯವರ ನೇತೃತ್ವದಲ್ಲಿ ಪಟ್ಟಣದ ಅಭಿವೃದ್ಧಿಗಾಗಿ ಒಗ್ಗೂಡಿ ಕೆಲಸ ಮಾಡುತ್ತೇವೆ. ಅದರಂತೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆ ಸಂದರ್ಭದಲ್ಲಿ ವರಿಷ್ಠರ ನಿರ್ಣಯಕ್ಕೆ ಬದ್ಧರಾಗಿದ್ದೇವೆ ಎಂದು 16 ಸದಸ್ಯರು ತಿಳಿಸಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭಾಸ್ಕರ ರಾಯಬಾಗಿ, ಬಿ.ಎಂ. ಸಜ್ಜನ, ಅಂಬರೀಶ ಬಳಿಗೇರ, ಬಾಳನಗೌಡ ಗೌಡರ ಸೇರಿದಂತೆ 16 ಜನ ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

