ಗದಗ

ಇಂದು ನರಗುಂದಕ್ಕೆ ಮುಖ್ಯಮಂತ್ರಿ ಚಂದ್ರು

Published On :

ಗದಗ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ೤ ಮುಖ್ಯಮಂತ್ರಿ ಚಂದ್ರು ಮೇ 22ರಂದು ಮಧ್ಯಾಹ್ನ 12.30 ಗಂಟೆಗೆ ನರಗುಂದ ಪಟ್ಟಣದ ದಂಡಿನಗುರಪ್ಪ ಮೆಮೋರಿಯಲ್ ಹಾಲ್‌ನಲ್ಲಿ (ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಿಂಭಾಗ) ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ನರಗುಂದದಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಐಡಿಬಿಐ ಬ್ಯಾಂಕ್ ಶಾಖೆ ಪ್ರಾರಂಭೋತ್ಸವ
ಗದಗ: ನಗರದ ಪಾಲಾ ಬದಾಮಿ ರಸ್ತೆಯ ಜನರಲ್ ಕಾರ್ಯಪ್ಪ ವೃತ್ತದ ಮಾನ್ವಿ ಬಿಲ್ಡಿಂಗ್‌ನಲ್ಲಿ ಐಡಿಬಿಐ ಬ್ಯಾಂಕ್‌ನ ನೂತನ ಶಾಖೆಯ ಪ್ರಾರಂಭೋತ್ಸವ ಮೇ 22ರ ಸಂಜೆ 4 ಗಂಟೆಗೆ ನಡೆಯಲಿದೆ. ಗದಗ ಎಂಪಿಎಂಸಿ ಚೇರ್‌ಮನ್ ಡಿ.ಆರ್. ಪಾಟೀಲ ಶಾಖೆ ಉದ್ಘಾಟಿಸುವರು. ಎಟಿಎಂನ್ನು ಗದಗ ಉಪವಿಭಾಗಾಧಿಕಾರಿ ಇಸ್ಲಾವುದ್ದೀನ ಗದ್ಯಾಳ ಉದ್ಘಾಟಿಸುವರು. ಐಡಿಬಿಐ ಬ್ಯಾಂಕ್ ಡಿಜಿಎಂ ಮತ್ತು ಪ್ರಾದೇಶಿಕ ಮುಖ್ಯಸ್ಥ ರಾಜೇಂದ್ರ ಪೂಜಾರಿ ಉಪಸ್ಥಿತರಿರುವರು ಎಂದು ಗದಗ ಶಾಖೆ ಮುಖ್ಯಸ್ಥ ವಿನಯಕುಮಾರ ಎನ್.ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.