ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನ
ಗದಗ: 2013-14ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 42 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ಶಿಷ್ಯ ವೇತನ ( 400-500) ನೀಡಲಾಗುವುದು. ಜತೆಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಅಧಾರದ ಮೇಲೆ ಕಲ್ಪಿಸಲಾಗುವುದು. ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜುಲೈ 1ಕ್ಕೆ 15 ರಿಂದ 23 ವರ್ಷಗಳ ವಯೋವುತಿಯಲ್ಲಿರಬೇಕು. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ವರ್ಷಗಳ ವಯೋವುತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸ್ಲಿಂಗ್ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಕಚೇರಿ ದೂ. 22485690, 22271628 ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ (ದೂ. 08272-218696) ಅಥವಾ ಆಯಾ ಜಿಲ್ಲೆಯ ಉಪ, ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಪಂ ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102 ಇವರಿಗೆ ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ ಎಂದು ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲಿಗೆ ತಾತ್ಕಾಲಿಕ ನಿಲುಗಡೆ
ಹುಬ್ಬಳ್ಳಿ: ಬಾಗಲಕೋಟೆ-ಸೊಲ್ಲಾಪುರ ಪ್ಯಾಸೆಂಜರ್ ರೈಲು (ನಂ. 57642) ಹುಬ್ಬಳ್ಳಿ ರೇಲ್ವೆ ವಿಭಾಗದ ಬಾಗಲಕೋಟೆ-ಸೊಲ್ಲಾಪುರ ಘಟಕ ಬಳಿಯ ನಿಂಬಾಳ ಮತ್ತು ಇಂಡಿ ರಸ್ತೆ ಮಧ್ಯದ ಚೋರ್ಗಿಹಾಲ್ಟ್ ನಿಲ್ದಾಣದಲ್ಲಿ ಒಂದು ನಿಮಿಷದ ವರೆಗೆ ತಾತ್ಕಾಲಿಕ ನಿಲುಗಡೆಗೊಳ್ಳಲಿದೆ. ತಕ್ಷಣದಿಂದ ಜಾರಿಗೊಂಡಿರುವ ಈ ಸೌಲಭ್ಯ 6 ತಿಂಗಳವರೆಗೆ ಮುಂದುವರೆಯಲಿದೆ. ಬಾಗಲಕೋಟೆ-ಸೊಲ್ಲಾಪುರ ಪ್ಯಾಸೆಂಜರ್ ರೈಲು (ನಂ. 57642) ರೈಲು ಚೋರ್ಗಿಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 7.36ಕ್ಕೆ ಆಗಮಿಸಿ, 7.37ಕ್ಕೆ ಹೊರಡುವುದು ಎಂದು ನೈರುತ್ಯ ರೇಲ್ವೆ ವಲಯದ ಕಚೇರಿ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

