ಗದಗ

ಕುಡಿವ ನೀರಿನ ಸಮಸ್ಯೆ-ಅಗತ್ಯ ಕ್ರಮ ತೆಗೆದುಕೊಳ್ಳಿ: ಪಾಟೀಲ

Published On :

ಕನ್ನಡಪ್ರಭ ವಾರ್ತೆ, ರೋಣ, ಮೇ 23
ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದು. ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಅಧಿಕಾರಿಗಳಿಗೆ ಆದೇಶ ನೀಡಿದರು.
ತಾಪಂ ಆವರಣದಲ್ಲಿ ಬುಧವಾರ ಸಂಜೆ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಹಣದ ಕೊರತೆಯಿಲ್ಲ. ಸಮಸ್ಯೆ ಇರುವ ಗ್ರಾಮಗಳಿಗೆ ತಕ್ಷಣ ಟ್ಯಾಂಕರ್ ನೀರು ಸರಬುರಾಜು ಮಾಡಬೇಕು. ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸಬೇಕು. ಇಲ್ಲದಿದ್ದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ತಹಶೀಲ್ದಾರ್ ಎಂ.ಬಿ. ಪಾಟೀಲ ಮಾತನಾಡಿ, ಕುಡಿವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಲಕ್ಕಲಕಟ್ಟಿ, ಅಮರಗಟ್ಟಿ, ಬೈರಾಪುರ, ಬೈರಾಪುರ ತಾಂಡಾಗಳಿಗೆ ಟ್ಯಾಂಕರ್ ಮೂಲಕ ನೀರು ಸರಬುರಾಜು ಮಾಡಲಾಗುತ್ತಿದೆ ಎಂದರು. ಮತಕ್ಷೇತ್ರದಲ್ಲಿ ಇರುವ ಕೆರೆಗಳ ಅಭಿವೃದ್ಧಿ, ಎಸ್‌ಸಿ, ಎಸ್‌ಟಿ ಕಾಲೋನಿಯಲ್ಲಿ ಕಾಂಕ್ರೇಟ್ ರಸ್ತೆ, ಒಳಚರಂಡಿ ಕಾಮಗಾರಿ ಸಮರ್ಪಕವಾಗಿ ನಿರ್ವಹಿಸಬೇಕು. ಈ ಹಿಂದೆ ಮಾಡಿದ ಅಭಿವೃದ್ಧಿ ಕಾಮಗಾರಿ ಮಾಹಿತಿ ಮತ್ತು ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ರುದ್ರಸ್ವಾಮಿ ನೂತನ ಶಾಸಕರಿಗೆ ಸನ್ಮಾನಿಸಿದರು. ಹೊಳೆಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಶರಥ ಗಾಣಿಗೇರ, ರೋಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐ.ಎಸ್. ಪಾಟೀಲ, ಪರುಶರಾಮಪ್ಪ ಅಳಗವಾಡಿ, ಅಮೃತಗೌಡ ಗೌಡರ, ಪ್ರಭು ಮೇಟಿ, ಮಿಥುನ ಪಾಟೀಲ, ವೀರಯ್ಯಾ ಸೋಮನಕಟ್ಟಿ, ಡಾ ಶಶಿಧರ ಹಟ್ಟಿ ಸೇರಿದಂತೆ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.