ಗದಗ

ಫಕೀರೇಶ್ವರ ಜಾತ್ರೆ: ಕಡುಬಿನ ಕಾಳಗ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಮೇ 26
ಜ. ಫಕೀರೇಶ್ವರ ಮಠದ ಜಾತ್ರಾ ಮಹೋತ್ಸವದ 2ನೇ ದಿನವಾದ ಭಾನುವಾರ ಸಂಭ್ರಮದ ಕಡುಬಿನ ಕಾಳಗ ಜರುಗಿತು.
ಈ ಸಂದರ್ಭದಲ್ಲಿ ಶ್ರೀ ಮಠದ 13ನೇ ಪಟ್ಟಾಧ್ಯಕ್ಷ ಜ. ಫಕೀರ ಸಿದ್ಧರಾಮ ಶ್ರೀಗಳು ಮಠದ ಸಂಪ್ರದಾಯದಂತೆ ಭಾನುವಾರ ಸಂಜೆ 5ಕ್ಕೆ ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿ ಮಠದ ಕುದುರೆಯನ್ನೇರಿ ಭಕ್ತರೆಡೆಗೆ ಬೆಲ್ಲದ ಕಣ್ಣಿ ತೂರುತ್ತಾ ಶ್ರೀಮಠದ 12 ಗದ್ದುಗೆಗೆ 3 ಸುತ್ತು ಸುತ್ತಿ 4 ಮತ್ತು 5ನೇ ಸುತ್ತಿಗೆ ಮಠದ ರಥಕ್ಕೆ ಸುತ್ತುಹಾಕಿ ನಂತರ ಅತ್ತಾರ ಮನೆತನದವರು ಸಂಪ್ರದಾಯದಂತೆ ಶ್ರೀಗಳಿಗೆ ಬಣ್ಣ ಎರಚುವುದು ಸಂಪ್ರದಾಯ.
ಜ. ಫಕೀರೇಶ್ವರ ಮಠದ ಜಾತ್ರೆ ಆಗಿ ಹುಣ್ಣಿಮೆಯ ಕೊನೆಯ ಜಾತ್ರೆ. ಲಕ್ಷಾಂತರ ಭಕ್ತರು ಶ್ರೀಗಳು ತೂರುವ ಬೆಲ್ಲದ ಕಣ್ಣಿ ಹಿಡಿದು ನಮಸ್ಕರಿಸಿ ಶ್ರೀಗಳಿಂದ ದೊರೆತ ಪ್ರಸಾದವೆಂದು ಪೂಜ್ಯನೀಯ ಭಾವನೆಯಿಂದ ಮನೆಗೆ ಕೊಂಡೊಯ್ದು ತಮ್ಮ ಮಕ್ಕಳಾದಿಯಾಗಿ ಸೇವಿಸುತ್ತಾರೆ. ಈ ಕಡುಬಿನ ಕಾಳಗದಲ್ಲಿ ಮಠದ ಆನೆ, ಒಂಟೆ, ಕುದುರೆ ಭಾಗವಹಿಸುವುದು ಸಂಪ್ರದಾಯ. ಅದರಂತೆ ಡೊಳ್ಳು, ಜಾಂಜ್‌ಮೇಳ, ನಂದಿಕೋಲು ಕಡುಬಿನ ಕಾಳಗಕ್ಕೆ ಮೆರಗು ತಂದವು. ಮಾಜಿ ಶಾಸಕ ರಾಮಣ್ಣ ಲಮಾಣಿ, ಪಪಂ ಅಧ್ಯಕ್ಷ ಹುಮಾಯೂನ ಮಾಗಡಿ, ಮಾಜಿ ಶಾಸಕ ಎಸ್.ಎನ್. ಪಾಟೀಲ, ಪಪಂ ಸದಸ್ಯ ಪರಮೇಶಿ ಪರಬ, ಸುಧೀರ ಜಮಖಂಡಿ, ವೈ.ಎಸ್. ಪಾಟೀಲ, ಬೀರಪ್ಪ ಸ್ವಾಮಿ, ಕಾಶಪ್ಪ ಸ್ವಾಮಿ, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸುರೇಶ ಅಕ್ಕಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.