ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ
ಕನ್ನಡಪ್ರಭ ವಾರ್ತೆ, ಗದಗ, ಮೇ 27
ಗದಗ-ಬೆಟಗೇರಿ ಅವಳಿ ನಗರದ ಜನತೆಗೆ ಕನಿಷ್ಠ 5 ದಿನಗಳಿಗೊಮ್ಮೆ ಕುಡಿವ ನೀರು ಪೂರೈಕೆ ಮಾಡಬೇಕು ಎನ್ನುವ ಉದ್ದೇಶದಿಂದ ನಗರದಲ್ಲಿರುವ ಎಲ್ಲ ಟ್ಯಾಂಕ್ಗಳಿಗೆ ನೀರು ಪೂರೈಸಲಾಗುತ್ತಿದೆ. ಈ ಟ್ಯಾಂಕ್ ಮೂಲಕ ಅವಳಿ ನಗರದ ಜನತೆಗೆ ನೀರು ಸರಬರಾಜು ಮಾಡಲಾಗುವುದು ಎಂದು ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದ ವೀರನಾರಾಯಣ ಉದ್ಯಾನವನದಲ್ಲಿರುವ ಮೇಲ್ಮಟ್ಟದ ಜಲಸಂಗ್ರಹಾಗಾರಕ್ಕೆ ನೀರು ಪೂರೈಕೆಯಾದ ಬಗ್ಗೆ ತಿಳಿಯಲು ಅಧಿಕಾರಿಗಳ ಸಮೇತ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಅವಳಿ ನಗರದಲ್ಲಿ ನೀರು ಪೂರೈಕೆಗಾಗಿ ಟಾಸ್ಕ್ಪೋರ್ಸ್ ಘಟಕವನ್ನು ಸ್ಥಾಪಿಸಲಾಗಿದ್ದು, ಅದು ಉತ್ತಮವಾಗಿ ಕೆಲಸ ಮಾಡುತ್ತಿದೆ. ಮತ್ತು ನಗರದಲ್ಲಿ ದುರಸ್ತಿಯಲ್ಲಿರುವ ಪೈಪ್ಲೈನ್ಗಳನ್ನು ತಕ್ಷಣದಲ್ಲಿಯೇ ಸರಿಪಡಿಸಲಾಗುತ್ತಿದೆ. ನಗರಕ್ಕೆ ಕನಿಷ್ಠ 5 ದಿನಗಳಿಗೆ ಒಮ್ಮೆ ನೀರು ಪೂರೈಕೆ ಮಾಡುವ ವ್ಯವಸ್ಥೆಯ ಬಗ್ಗೆ ಇನ್ನೂ 2-3 ದಿನಗಳಲ್ಲಿ ಸ್ಪಷ್ಟವಾದ ಚಿತ್ರಣವು ದೊರೆಯಲಿದೆ. ಹೊಂಬಳ ನಾಕಾ ಕಾಲೋನಿ, ಜಾಕೀರಹುಸೇನ ಕಾಲೋನಿ ಸೇರಿದಂತೆ ನಗರದ ಹೊಸ ಬಡಾವಣೆಗಳಿಗೆ ನೀರು ಪೂರೈಕೆ ಸ್ವಲ್ಪ ವಿಳಂಬವಾಗಬಹುದು. ಕಾರಣ ಇದಕ್ಕೆ ತಾಂತ್ರಿಕ ತೊಂದರೆ ಇದೆ. ಅದನ್ನು ತಕ್ಷಣದಲ್ಲಿಯೇ ಪರಿಹರಿಸುವ ಕಾರ್ಯ ಮಾಡಲಾಗುವುದು. ನಗರಸಭೆಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂನಲ್ಲಿ ಕುಡಿವ ನೀರಿನ ಬಗ್ಗೆ ಸಂಬಂಧಿಸಿದ ದೂರುಗಳು ಕಡಿಮೆ ಬಂದಿವೆ. ನಗರದ ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಟ್ಯಾಂಕ್ಗಳಲ್ಲಿ ನೀರು ಸಂಗ್ರಹವಾಗುತ್ತಿದ್ದು, ಅದನ್ನು ಅಧಿಕಾರಿಗಳ ಮೇಲುಸ್ತುವಾರಿಯಲ್ಲಿ ಸಮರ್ಪಕವಾಗಿ ಪೂರೈಕೆ ಮಾಡಲಾಗುವುದು ಎಂದರು. ಉಪವಿಭಾಗಾಧಿಕಾರಿ ಐ.ಜಿ. ಗದ್ಯಾಳ ಸೇರಿದಂತೆ ನಗರಸಭೆಯ ಅಧಿಕಾರಿಗಳು ಹಾಗೂ ನಗರಸಭೆಯ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

