ಗದಗ

ಮುಳಗುಂದದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಜೂ. 10ಕ್ಕೆ

Published On :

ಮುಳಗುಂದ: ಬರುವ ಜೂ. 10ರಂದು 1 ದಿನ ಗದಗ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾ ಕಸಾಪ ಹಾಗೂ ಸ್ಥಳೀಯ ನಾಗರಿಕರ ಸಹಯೋಗದಲ್ಲಿ ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿ ಕಲಾಭವನದಲ್ಲಿ ಏರ್ಪಡಿಸಲಾಗುವುದು ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ. ಶಿವಪ್ಪ ಕುರಿ ಹೇಳಿದರು.
ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಹೆಚ್ಚು ಸಾಹಿತ್ಯ ಬೆಳವಣಿಗೆಯ ದೃಷ್ಟಿಯಿಂದ ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿ ಕಲಾಭವನದಲ್ಲಿ ಈ ತಾಲೂಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಸಾಹಿತ್ಯ ಗೋಷ್ಠಿ, ಕವಿಗೋಷ್ಠಿ, ಬಹಿರಂಗ ಅಧಿವೇಶನ, ತಾಲೂಕು ದರ್ಶನದ ಇನ್ನಿತರ ಕಾರ್ಯಕ್ರಮ ಮೂಲಕ ಸಾಹಿತ್ಯವನ್ನು ಬೆಳೆಸುವುದರ ಜತೆಗೆ ಈ ಭಾಗದ ಗಂಭೀರ ಸಮಸ್ಯೆಯನ್ನು ಸಮ್ಮೇಳನದಲ್ಲಿ ಗೊತ್ತುವಳಿ ಮಂಡಿಸಲಾಗುವುದು ಎಂದರು.
ಜೂ. 10ಕ್ಕೆ ರಾಜ್ಯಮಟ್ಟದ ಡೊಳ್ಳಿನ ಸ್ಪರ್ಧೆ
ಗದಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ 65ನೇ ಹುಟ್ಟು ಹಬ್ಬದ ಅಂಗವಾಗಿ ಜೂ. 10ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ರಾಜ್ಯ ಮಟ್ಟದ ಡೊಳ್ಳಿನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.  ತಾಪಂ ಸದಸ್ಯ ಪ್ರಹ್ಲಾದ ಹೊಸಳ್ಳಿ ಅಧ್ಯಕ್ಷತೆ ವಹಿಸುವರು. ಅಂದು ಬಡರೋಗಿಗಳಿಗೆ ಹಾಲು, ಹಣ್ಣು, ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಅಂಧ ಮಕ್ಕಳಿಗೆ ಬಟ್ಟೆ ವಿತರಣೆ ಹಾಗೂ ಹಲವಾರು ಕಾರ್ಯಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ರಾಜ್ಯ ಉಪಾಧ್ಯಕ್ಷ ಅರುಣ ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಬೇಸಿಗೆ ಶಿಬಿರ
ಮುಂಡರಗಿ:  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹಾಗೂ ಮಹಾಗಣಪತಿ ಗ್ರಾಮೀಣ ಸಮಾಜ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಮೇ 27ರಿಂದ ಜೂ. 5ರ ವರೆಗೆ 10 ದಿನಗಳ ಕಾಲ ವಿಶೇಷ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ನುರಿತ ಶಿಕ್ಷಕರಿಂದ ಚಿತ್ರಕಲೆ, ಯೋಗ ಹಾಗೂ ಸಮೂಹ ನೃತ್ಯವನ್ನು ಕಲಿಸಲಾಗುವುದು. ಶಿಬಿರವು ಪಟ್ಟಣದ ಮಹಾಗಣಪತಿ ಗ್ರಾಮೀಣ ಸಮಾಜ ಸೇವಾ ಸಂಸ್ಥೆಯ ಕಚೇರಿಯಲ್ಲಿ ಜರುಗಲಿದೆ. ಆಸಕ್ತ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅವಿನಾಶ ಗೋಡಖಿಂಡಿ (9448837228) ಅಥವಾ ಸಿಆರ್‌ಪಿ ಎಚ್.ಜಿ. ಗದ್ದಿಗೌಡರ (9945023642) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.