ಧಾರ್ಮಿಕ ಕಾರ್ಯಗಳಿಂದ ಶಾಂತಿ, ನೆಮ್ಮದಿ
ನರೇಗಲ್ಲ: ಗ್ರಾಮದಲ್ಲಿ ಧಾರ್ಮಿಕ ಕಾರ್ಯಗಳು ಮೇಲಿಂದ ಮೇಲೆ ನಡೆಯುವುದರಿಂದ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ಮಾರುತೇಶ್ವರ ಸೇವಾ ಸಮಿತಿಯವರು ಮಾರುತಿಯ ನೂತನ ದೇವಸ್ಥಾನ ನಿರ್ಮಿಸಿ ಮಾರುತಿಯ ಪ್ರತಿಷ್ಠಾಪನೆಗೆ ಮುಂದಾಗಿರುವುದು ಗ್ರಾಮದಲ್ಲಿನ ಭಕ್ತರ ಭಕ್ತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹಾಲಕೆರೆಯ ಅಭಿನವ ಅನ್ನದಾನ ಶ್ರೀ ಹೇಳಿದರು. ಈಚೆಗೆ ಅವರು ಸಮೀಪದ ಹಾಲಕೆರೆಯಲ್ಲಿ ಮಾರುತೇಶ್ವರ ಸೇವಾ ಸಮಿತಿಯ ಆಶ್ರಯದಲ್ಲಿ ಮಾರುತೇಶ್ವರ ದೇವಸ್ಥಾನ ಉದ್ಘಾಟನೆಯ ನಿಮಿತ್ತ ಸಮಿತಿಯವರು ಮತ್ತು ಗ್ರಾಮದ ಸದ್ಭಕ್ತರು ಸೇರಿ ಶ್ರೀಗಳಿಗೆ ನೀಡಿದ ತುಲಾಭಾರ ಸೇವೆಯನ್ನು ಸ್ವೀಕರಿಸಿ ಮಾತನಾಡಿದರು. ಹಾಲಕೆರೆ ಗ್ರಾಮವು ಸ್ವಾತಂತ್ರ್ಯ ಪೂರ್ವದಲ್ಲಿಯೇ ಧಾರ್ಮಿಕ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸಿದ ಗ್ರಾಮ. ಇಲ್ಲಿನ ಶ್ರೀಗಳಾದ ಗುರು ಅನ್ನದಾನೀಶ್ವರರು ಹಿಮಾಲಯದಲ್ಲಿ ತಪಸ್ಸು ಮಾಡಿ, ಮೂರು ಕೋಟಿ ಜಪ ಮಾಡಿ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಆದ ಬೆಳಕು ಚೆಲ್ಲಿದ್ದಾರೆ. ಅಂದಿನ ವಿದ್ಯಾರ್ಥಿಗಳು ಶಾಲೆ ಕಲಿಯಲು ಪಡುತ್ತಿದ್ದ ತೊಂದರೆಯನ್ನು ಮನಗಂಡು ದೂರ ದೃಷ್ಟಿಯಿಂದ ಸಮೀಪದ ನರೇಗಲ್ಲನಲ್ಲಿ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯನ್ನು ಸ್ಥಾಪಿಸಿ, ಆ ಮೂಲಕ ಶೈಕ್ಷಣಿಕ ರಂಗದಲ್ಲಿ ಮಹತ್ತರ ಕ್ರಾಂತಿಯನ್ನು ಮಾಡಿದ್ದಾರೆ ಎಂದರು.
ಸಾನ್ನಿಧ್ಯ ವಹಿಸಿದ್ದ ನಿಡಗುಂದಿಕೊಪ್ಪದ ಶಿವಬಸವ ಶ್ರೀಗಳು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಡಾ. ಸಿದ್ದಲಿಂಗಯ್ಯ ಸೊಪ್ಪಿಹಿರೇಮಠ, ಪ್ರವಚನಕಾರ ಶಿವಕುಮಾರ ಲಗಳೂರ ಮುಂತಾದವರು ಉಪಸ್ಥಿತರಿದ್ದರು. ಶರಣಪ್ಪ ಮೇಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಕೆ.ಎಂ. ಗೆದಗೇರಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

