ಗದಗ

ಇಂದು ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗೆ ಮನವಿ

Published On :

ಗದಗ: ಜಿಲ್ಲೆಯಲ್ಲಿ ಸುಮಾರು 300 ವಿದ್ಯಾರ್ಥಿಗಳು ನರ್ಸಿಂಗ್ ತರಬೇತಿಯನ್ನು ಪಡೆಯುತ್ತಿದ್ದು, ಈ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಹುಬ್ಬಳ್ಳಿಯಲ್ಲಿ ನಡೆಸಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮತ್ತು ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ ಬೆಂಗಳೂರ ಇವರು ತೀರ್ಮಾನಿಸಿದ್ದು, ಇದನ್ನು ಖಂಡಿಸಿ ಜಿಲ್ಲೆಯ ನರ್ಸಿಂಗ್ ವಿದ್ಯಾರ್ಥಿಗಳು ಮೇ 30ರಂದು ಮುಳಗುಂದ ನಾಕಾದ ಮಹಾವೀರ ವೃತ್ತದಿಂದ ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಅರ್ಪಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಪಡಿತರ ಚೀಟಿ: ನಾಳೆ ಪ್ರತಿಭಟನೆ
ಗದಗ: ಜಿಲ್ಲೆಯಲ್ಲಿ ಪಡಿತರ ಚೀಟಿ ಹೊಂದಲು ಸಾರ್ವಜನಿಕರಿಗಾಗುತ್ತಿರುವ ತೊಂದರೆ ನಿವಾರಿಸುವಂತೆ ಆಗ್ರಹಿಸಿ ಮೇ 31ರಂದು ಶ್ರೀರಾಮ ಸೇನೆ ಗದಗ ಜಿಲ್ಲಾ ಘಟಕ, ಜಿಲ್ಲಾ ಗಣೇಶ ಮೂರ್ತಿ ತಯಾರಕರ ಸಂಘ, ನಾಗೇಶ್ವರ ಮಿತ್ರ ಮಂಡಳಿ, ಭಗತ್ಸಿಂಗ್ ಯುವಕ ಸಂಘಗಳ ಆಶ್ರಯದಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ, ತಹಸೀಲ್ದಾರ್ಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಿಂದ ಬೆಳಗ್ಗೆ 10ಕ್ಕೆ ಪ್ರಾರಂಭವಾಗುವ ಈ ಬೃಹತ್ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಹೆಚ್ಚಿನ ಮಾಹಿತಿಗಾಗಿ ರಾಜೂ ಖಾನಪ್ಪನವರ- ಮೊ. 9164437767, ಮುಕ್ಕಣ್ಣ ಮಾದಗುಂಡಿ-8123193059 ಇಲ್ಲಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಮಟ್ಕಾ: ಮೂವರ ಬಂಧನ
ಗದಗ:  ನಗರದ ಮಹಾತ್ಮಗಾಂಧಿ ವೃತ್ತದ ಬಳಿ ಇರುವ ಕುಮಾರೇಶ್ವರ ಕಾಂಪ್ಲೆಕ್ಸ್ ಹತ್ತಿರ ಮಟಕಾ ಆಡುತ್ತಿದ್ದ ಮೂವರನ್ನು ಗದಗ ಶಹರ ಪೊಲೀಸರು ಬಂಧಿಸಿದ್ದಾರೆ. ಅವರಿಂದ ರು. 1,62,000 ವಶಪಡಿಸಿಕೊಡಿದ್ದಾರೆ. ನಗರದ ನಿವಾಸಿಗಳಾದ ಶ್ರೀಕಾಂತ ಭಾಂಡಗೆ, ಕಿರಣ ಬಾಕಳೆ, ವಿನೋದ ಶಿದ್ಲಿಂಗ್ ಬಂಧಿತ ಆರೋಪಿಗಳು. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಪೀಟ್: 9 ಜನ ಬಂಧನ
ಗದಗ:  ನಗರದ ಎಪಿಎಂಸಿ ಯಾರ್ಡ್ ಮೆಣಸಿನಕಾಯಿ ಬಜಾರ ಹಂಜಗಿಯವರ ದಲಾಲಿ ಅಂಗಡಿ ಹತ್ತಿರ ಇಸ್ಪೀಟ್ ಜೂಜಾಟ ಆಡುತ್ತಿದ್ದ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರು. 4700 ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿ: 6 ಜನರ ಬಂಧನ
ನರೇಗಲ್ಲ: ಸಮೀಪದ ತೋಟಗಂಟಿ ಗ್ರಾಮದಲ್ಲಿ ಮಂಗಳವಾರ ಇಸ್ಪೀಟ್ ಆಡುತ್ತಿದ್ದ 6 ಜನರನ್ನು ಸ್ಥಳೀಯ ಪಿಎಸ್ಐ ಎಚ್.ಎಂ. ಪಾಟೀಲ ನೇತೃತ್ವದ ತಂಡ ದಾಳಿ ಮಾಡಿ ಬಂಧಿಸಿದ್ದು, ಬಂಧಿತರಿಂದ ರು. 650 ಹಾಗೂ 4 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರತು ನರೇಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.