ಲೋಕಾಯುಕ್ತರ ಭೇಟಿ: ಮನವಿ ಸ್ವೀಕಾರ
ನರಗುಂದ: ಪಟ್ಟಣದ ತಾಪಂ ಭವನದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸಂಗನಗೌಡ ಭೇಟಿ ನೀಡಿ ಸಾರ್ವಜನಿಕರು ನೀಡಿದ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಗರದ ಶಂಕರಲಿಂಗ ಓಣಿಯ ನಿವಾಸಿ ಪ್ರಕಾಶ ಜಾಧವ ಮನವಿ ಸಲ್ಲಿಸಿ ಮಾತನಾಡಿ, 2003-04ರಲ್ಲಿ ಪುರಸಭೆಯವರು ಈ ಓಣಿಯಲ್ಲಿ ಶೌಚಾಲಯ ನಿರ್ಮಿಸಿದ್ದಾರೆ. ಈ ಶೌಚಾಲಯಕ್ಕೆ ಸೂಕ್ತ ಸೌಲಭ್ಯಗಳಿಲ್ಲದೆ ಇದು ಹಂದಿಗಳ ತಾಣವಾಗಿದೆ. ಈ ಕುರಿತು ಸಂಬಂಧಿಸಿದ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ನಂತರ ಮಾತನಾಡಿದ ಲೋಕಾಯುಕ್ತ ಸಂಗನಗೌಡ, ಇದಕ್ಕೆ ಸಂಬಂಧಪಟ್ಟ ಪುರಸಭೆ ಅಧಿಕಾರಿ ಎಸ್. ರಾಜಶೇಖರ ಅವರೊಂದಿಗೆ ಚರ್ಚಿಸಿ, ಪುರಸಭೆ ಅಧಿಕಾರಿ ಹಿಂದಿನ ಅಧಿಕಾರಿಗಳು ಕೆಲವು ಕಾರಣಾಂತರಗಳಿಂದ ಈ ಶೌಚಾಲಯಕ್ಕೆ ಏನು ಮಾಡಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಮೇಲಾಗಿ ನಾನು ಅಧಿಕಾರ ವಹಿಸಿಕೊಂಡ ಮೇಲೆ ಇದರ ಬಗ್ಗೆ ನನಗೆ ಯಾವುದೇ ಮನವಿ ಬಂದಿಲ್ಲ. ಈಗ ಮನವಿ ಬಂದಿದ್ದು, ಈ ಕೂಡಲೇ ಸಮರ್ಪಕ ಮಾಹಿತಿ ಪಡೆದುಕೊಂಡು ಮುಂದಿನ ಒಂದು ವಾರದೊಳಗೆ ಶೌಚಾಲಯವನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಎಸ್.ಎಂ. ಚೂರಿ, ಅನ್ನಪ್ಪಗೌಡ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

