ಹೆಸರೂರಿನಲ್ಲಿ ಇಂದು ಅಡ್ಡಪಲ್ಲಕ್ಕಿ ಮಹೋತ್ಸವ
ಲಕ್ಷ್ಮೇಶ್ವರ: ಸಮೀಪದ ಹೆಸರೂರಿನಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ 1008 ಜಗದ್ಗುರು ಪ್ರಸನ್ರೇಣುಕ ವೀರಸೋಮೇಶ್ವರ ಶ್ರೀಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ಏರ್ಪಡಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ, 12 ಗಂಟೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ, ನಂತರ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದ ಉದ್ಘಾಟನೆ ನೆರವೇರಲಿದೆ. ನಂತರ ಶ್ರೀಗಳಿಂದ ಜನಜಾಗೃತಿ ಧರ್ಮಸಭೆ ಜರಗುವುದು. ಬಂಕಾಪುರದ ಅರಳೆಲೆ ಮಠದ ರೇವಣಸಿದ್ದೇಶ್ವರ ಶ್ರೀಗಳು, ಅಬ್ಬಿಗೇರಿಯ ವಿಜಯಾನಂದ ಶ್ರೀಗಳು, ಹಾವೇರಿಯ ಬಣ್ಣದಮಠದ ಅಭಿನವರುದ್ರ ಚೆನ್ನಮಲ್ಲಿಕಾರ್ಜುನ ಶ್ರೀಗಳು, ಲಕ್ಷ್ಮೇಶ್ವರದ ಕರೆವಾಡಿಮಠದ ಮಳೆ ಮಲ್ಲಿಕಾರ್ಜುನ ಶ್ರೀಗಳ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಹಾವೇರಿ ಸಂಸದ ಶಿವಕುಮಾರ ಉದಾಸಿ, ಶಾಸಕ ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ವಿಪ ಸದಸ್ಯ ಶ್ರೀನಿವಾಸ ಮಾನೆ, ಶಿವರಾಜ ಸಜ್ಜನ, ಮಾಜಿ ಶಾಸಕ ನೆಹರೂ ಓಲೇಕಾರ, ಹಾವೇರಿ ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ, ಸವಣೂರು ತಾಪಂ ಅಧ್ಯಕ್ಷ ರುದ್ರಗೌಡ ಪಾಟೀಲ, ಮಾಜಿ ಸಂಸದ ಮಂಜುನಾಥ ಕುನ್ನೂರು, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಲಿಂಬಯ್ಯ ಸ್ವಾಮಿಮಠ, ಶಿವಣ್ಣ ನೆಲವಿಗಿ, ಡಾ, ವೈ.ಎಫ್. ಹಂಜಿ, ಗ್ರಾಂಪ ಅಧ್ಯಕ್ಷೆ ಮಲ್ಲವ್ವ ತಳವಾರ ಆಗಮಿಸುವರು ಎಂದು ಭಕ್ತಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರವೇಶ ಪ್ರಾರಂಭ
ಗಜೇಂದ್ರಗಡ: ಸ್ಥಳೀಯ ಜ. ತೋಂಟದಾರ್ಯ (ಸಿಬಿಎಸ್ಇ) ಮಹಾವಿದ್ಯಾಲಯದಲ್ಲಿ ಪ್ರಸಕ್ತ ವರ್ಷದ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳು ಆರಂಭಗೊಂಡಿದ್ದು, ಉತ್ತಮ ಗುಣಮಟ್ಟದ ವಿದ್ಯಾರ್ಜನೆಗಾಗಿ ಸುಸಜ್ಜಿತ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯ ಜತೆಗೆ ಇಂಟರ್ನೆಟ್ ಸೌಲಭ್ಯ ಸೇರಿದಂತೆ ಎಲ್ಲ ಮೂಲ ಸೌಲಭ್ಯ ಸಂಸ್ಥೆ ಒಳಗೊಂಡಿದೆ. ಈಗಾಗಲೇ ಪ್ರವೇಶಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪಡೆದುಕೋಳ್ಳಬೇಕೆಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

