ಗದಗ

ಶಾಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಆಗ್ರಹ

Published On :

ಗದಗ: ವಸತಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕರನ್ನು ವಜಾಗೊಳಿಸುವಂತೆ ಕರ್ನಾಟಕ ವಸತಿ ಶಿಕ್ಷಣ ಮಂಡಳಿ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ ನ್ಯಾಯಾಲಯದ ಆದೇಶ ಹೊರಬರುವ ವರೆಗೂ ನಮ್ಮನ್ನು ಸೇವೆಯಲ್ಲಿ ಮುಂದುವರೆಸಬೇಕು ಎಂದು ಆಗ್ರಹಿಸಿ ಶುಕ್ರವಾರ ಮೊರಾರ್ಜಿ ದೇಸಾಯಿ, ವಾಜಪೇಯಿ, ರಾಣಿ ಚನ್ನಮ್ಮ ಮಾದರಿ ವಸತಿ ಶಾಲೆಯ ಶಿಕ್ಷಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ವಾಜಪೇಯಿ, ರಾಣಿ ಚನ್ನಮ್ಮ ಮಾದರಿ ವಸತಿ ಶಾಲೆಗಳಲ್ಲಿ ಸುಮಾರು 5-6 ವರ್ಷಗಳಿಂದ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಕರ್ನಾಟಕ ವಸತಿ ಶಿಕ್ಷಣ ಮಂಡಳಿಯು 2012ರಲ್ಲಿ ನಮ್ಮನ್ನು ಸೇವೆಯಿಂದ ಮುಕ್ತಿಗೊಳಿಸಿ ಕಾಯಂ ಶಿಕ್ಷಕರನ್ನು ನಮ್ಮ ಸ್ಥಳಕ್ಕೆ ನಿಯೋಜನೆ ಮಾಡಿದ್ದು, ಇದರ ವಿರುದ್ಧ ಶಿಕ್ಷಕರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರಿಂದ ನ್ಯಾಯಾಲಯವು ಅಂತಿಮ ಆದೇಶ ನೀಡುವ ವರೆಗೂ ನಮ್ಮನ್ನು ಸೇವೆಯಲ್ಲಿ ಮುಂದುವರೆಸುವ ಆವಕಾಶ ಮಾಡಿಕೊಡಲಿಲ್ಲ. ಇದರಿಂದಾಗಿ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕರು ನಿರುದ್ಯೋಗಿಗಳಾಗಿದ್ದಾರೆ ಎಂದರು. ವೀರಣ್ಣ ಕಮ್ಮಾರ, ಹಾಮೇಶ ರಾಠೋಡ, ಶರಣಪ್ಪ ಅಂಕದ, ಬಸಯ್ಯ ಗೌರಿಮಠ, ಎನ್.ಎಸ್. ಚಳಮರದ, ಕೆ.ಎಂ. ಮಂಜುಳಾ, ಶೋಭಾ ಗೌಡರ, ಗೀತಾ ಬಳಿಗೇರ, ಸಂಗನಗೌಡ ಪಾಟೀಲ, ಬಿ.ಪಿ. ಬೊಮ್ಮನಗೌಡ್ರ, ಎಸ್.ಎಚ್. ಬಸಾಪುರ, ಎನ್.ಡಿ. ಶಿರೋಳಮಠ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.