ಗದಗ

ಇಂದು ಸಾರ್ವಜನಿಕ ಕುಂದುಕೊರತೆ ಸಭೆ

Published On :

ಗದಗ: ಸಾರ್ವಜನಿಕ ಕುಂದುಕೊರತೆಗಳ ವಿಷಯಕ್ಕೆ ಸಂಬಂಧಿಸಿದಂತೆ, ಮುಖ್ಯವಾಗಿ ಸರ್ಕಾರದ ಆಹಾರ ಭದ್ರತೆ ಯೋಜನೆಯಡಿ ಸಾರ್ವಜನಿಕ ವಿತರಣಾ ಪದ್ಧತಿ, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 1ರಂದು (1ನೇ ಶನಿವಾರ) ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಗ್ಗೆ 10.30 ಗಂಟೆಗೆ ಸಭೆ ಜರುಗಿಸಲಾಗುವುದು.  ಆಹಾರ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಸಾಹಿತ್ಯ ಸಂಜೆ ಕಾರ್ಯಕ್ರಮ, ಉಪನ್ಯಾಸ
ಗದಗ: ಜಿಲ್ಲಾ ಕಸಾಪ ವತಿಯಿಂದ ಶನಿವಾರ ಸಾಹಿತ್ಯ ಸಂಜೆ ಕಾರ್ಯಕ್ರಮದ ಉಪನ್ಯಾಸವು ಜೂನ್ 1ರಂದು ಸಂಜೆ 6ಕ್ಕೆ ತಾಪಂ ಆವರಣದಲ್ಲಿರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆಯಲಿದೆ.  ಶಿಕ್ಷಕಿ ಕ್ಷಮಾ ವಸ್ತ್ರದ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ವಹಿಸುವರು.  ಮಂಜುಳಾ ಇಟಗಿ ಕವನ ವಾಚಿಸಲಿದ್ದಾರೆ.  ಸಾಹಿತಿಗಳು, ಕಲಾವಿದರು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು,  ಪಾಲ್ಗೊಳ್ಳಬೇಕೆಂದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶರಣು ಗೋಗೇರಿ, ಡಾ. ಸಂಗಮೇಶ ತಮ್ಮನಗೌಡರ, ಗೌರವ ಕೋಶಾಧ್ಯಕ್ಷ ಮಲ್ಲೇಶ ಡಿ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.