ಜನಪದ ಕಲೆ, ಸಾಹಿತ್ಯ ಉಳಿವಿಗೆ ಶ್ರಮಿಸಿ
ಕನ್ನಡಪ್ರಭ ವಾರ್ತೆ, ಗದಗ, ನ. 1
ಜನಪದ ಕಲೆ, ಸಾಹಿತ್ಯ, ಜನಪದ ಹಾಡುಗಳು ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ತಿಳಿಸಿಕೊಡುತ್ತವೆ. ಈ ನಿಟ್ಟಿನಲ್ಲಿ ಜನಪದ ಉಳಿಸಿ, ಬೆಳೆಸುವ ಅವಶ್ಯಕತೆ ಇದೆ ಎಂದು ಡಾ. ಎಸ್.ಎಫ್. ಜಕಬಾಳ ಹೇಳಿದರು.
ತಾಲೂಕಿನ ಅಡವಿಸೋಮಾಪುರ ಗ್ರಾಮದ ಗ್ರಾಮದೇವತೆ ದೇವಸ್ಥಾನದಲ್ಲಿ ಕನಕದಾಸ ಶಿಕ್ಷಣ ಸಮಿತಿಯ ಕೆವಿಎಸ್ಆರ್ ಸಂಯುಕ್ತ ಪಪೂ ಮಹಾವಿದ್ಯಾಲಯದ ವತಿಯಿಂದ ಈಚೆಗೆ ಜರುಗಿದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಗ್ರಾಮೀಣ ಜನಪದ ಕಲೆಗಳು ಕುರಿತು ಜರುಗಿದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಪದ ಹಾಡುಗಳು ನಾಡಿನ ಸಂಸ್ಕೃತಿ ಎತ್ತಿ ಹಿಡಿದಿವೆ. ಜನಪದ ಕಲೆಗಳಿಂದ ರೋಗಗಳನ್ನು ವಾಸಿ ಮಾಡಬಹುದು. ಜನಪದ ಕಲೆಗಳನ್ನು ಉಳಿಸುವ ಪ್ರಯತ್ನವನ್ನು ಯುವಕರು ಮಾಡಬೇಕು ಎಂದರು. ಸಂಕೇಶ ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಕಾಶಪ್ಪನವರ ಮಾತನಾಡಿ, ಜನಪದ ಕಲೆ, ಸಾಹಿತ್ಯವನ್ನು ಮೈಗೂಡಿಸಿಕೊಳ್ಳಬೇಕು. ಯುವಕರು ಸಾಮಾಜಿಕ ಸೇವೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಸುದಾರಣೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಪ್ರೊ. ಸಿದ್ದು ಯಾಪಲಪರವಿ ಮಾತನಾಡಿ, ಜನಪದ ಕಲೆಗಳಿಗೆ ಮಹತ್ತರವಾದ ಶಕ್ತಿ ಇದೆ. ಆಧುನಿಕ ಪ್ರಭಾವದಿಂದಾಗಿ ಇಂದು ನಶಿಸುತ್ತಿರುವ ದೊಡ್ಡ ಆಟ, ಬೈಲಾಟ, ನಾಟಕ ಉಳಸಿ, ಬೆಳೆಸುವ ನಿಟ್ಟಿನಲ್ಲಿ ಯುವಕರು ಶ್ರಮಿಸಬೇಕು ಎಂದರು.
ಶಿಬಿರಾಧಿಕಾರಿ ವಿ.ಎಸ್. ದಲಾಲಿ ಪ್ರಾಸ್ತಾವಿಕ ಮಾತನಾಡಿದರು. ಗ್ರಾಪಂ ಸದಸ್ಯ ಚನ್ನಪ್ಪ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಭಯ್ಯ ಬಾಳೆವಾಡಿಮಠ, ಆರ್.ಎನ್. ಭಂಡಾರಿ, ಅಶೋಕ ಬಡಿಗೇರ, ವೀರಣ್ಣ ಅಂಗಡಿ, ರಾಮಣ್ಣ ಪುರದ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸುನಿತಾ ಆಲದಕಟ್ಟಿ ಪ್ರಾರ್ಥಿಸಿದರು. ಜ್ಯೋತಿ ದೊಡ್ಡಮನಿ ಸ್ವಾಗತಿಸಿದರು. ಎಲ್.ಆರ್. ಶೆಟ್ಟಪ್ಪನವರ ನಿರೂಪಿಸಿದರು. ಯಲ್ಲಪ್ಪ ಗುದಗಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

