ಗದಗ

ಜನ ಮನಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

Published On :

ಗದಗ: 58ನೇ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಬಸವೇಶ್ವರ ಪ್ರೌಢ ಶಾಲೆಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಜರುಗಿದ ನೃತ್ಯ, ಸಿಡಿಓ ಜೈನ್ ಪ್ರೌಢ ಶಾಲೆಯ 500 ವಿದ್ಯಾರ್ಥಿಗಳು, ಕೆಎಲ್‌ಇ ಪ್ರೌಢ ಶಾಲೆಯ 200 ವಿದ್ಯಾರ್ಥಿಗಳು, ಲೈನ್ಸ್ ಪ್ರೌಢ್ ಶಾಲೆಯ 300 ವಿದ್ಯಾರ್ಥಿಗಳು, ಪಾರ್ಶ್ವನಾಥ ಪ್ರೌಢ ಶಾಲೆಯ 100ಕ್ಕೂ ವಿದ್ಯಾರ್ಥಿಗಳು ಕನ್ನಡ ಗೀತೆಗಳಿಗೆ ವಿದ್ಯಾರ್ಥಿಗಳು ಆಕರ್ಷಕವಾದ ರೀತಿಯಲ್ಲಿ ಸಾಮೂಹಿಕ ಹೆಜ್ಜೆ ಹಾಕಿ ರಾಜ್ಯೋತ್ಸವ ಸಮಾರಂಭದ ಮೆರುಗು ಹೆಚ್ಚಿಸಿದರು. ಚೇತನ ಕರಾಟೆ ಕ್ಲಬ್‌ನ ಪರಶುರಾಮ ಹಬೀಬ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಕರಾಟೆ ಪಟುಗಳಿಂದ ನಡೆದ ಕರಾಟೆ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.  ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸ್ತಬ್ಧ ಚಿತ್ರಗಳಿಗೆ ಹಾಗೂ ನೃತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಲೆಗಳಿಗೆ ಹಾಗೂ ಪಥ ಸಂಚಲನದಲ್ಲಿ ಪಾಲ್ಗೊಂಡವರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.