ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ
ಮುಂಡರಗಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಸಂಭ್ರಮದ ರಾಜ್ಯೋತ್ಸವ ಆಚರಿಸಲಾಯಿತು.
ಜಗದ್ಗುರು ಅನ್ನದಾನೀಶ್ವರ ಮಹಾವಿದ್ಯಾಲಯದ ಆವರಣದಲ್ಲಿ ತಾಲೂಕು ಆಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರುಗಿದರೆ, ಕನ್ನಡ ಕ್ರಾಂತಿ ಸೇನೆಯ ಪದಾಧಿಕಾರಿಗಳಿಂದ ಪಟ್ಟಣದ ಜಾಗೃತ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಜರುಗಿತು. ಇಲ್ಲಿನ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯವರು ತಾಲೂಕು ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣು ವಿತರಿಸುವ ಮೂಲಕ ವಿಭಿನ್ನವಾಗಿ ಆಚರಣೆ ಮಾಡಿದರು.
ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ: ಇಲ್ಲಿನ ಬಸವ ಸಾಂಸ್ಕೃತಿಕ ವೇದಿಕೆ ಹಾಗೂ ಬಸವ ಜಾಗೃತಿ ಫೌಂಡೇಶನ್ ವತಿಯಿಂದ ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯಾವುದೇ ವಯಸ್ಸಿನ ಮಿತಿಯನ್ನು ನಿಗದಿಪಡಿಸದೇ ಎಲ್ಲರಿಗೂ ಮುಕ್ತವಾಗಿ ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಈ ಸಂಘಟನೆಗಳು ಕನ್ನಡ ಭಾಷೆಯ ಉಳಿವಿಗಾಗಿ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ರಾಜ್ಯೋತ್ಸವದ ವಿಶೇಷವಾಗಿತ್ತು.
ಚಾಲಕರ ಕನ್ನಡಪ್ರೇಮ: ಇಲ್ಲಿನ ಸುಮಾರು 150ಕ್ಕೂ ಹೆಚ್ಚು ಕಾರು ಹಾಗೂ ಟ್ರ್ಯಾಕ್ಸ್ ಟೆಂಪೊಗಳ ಚಾಲಕರು ತಮ್ಮ ವಾಹನಗಳನ್ನು ಶೃಂಗರಿಸಿಕೊಂಡು ವಾಹನಗಳಿಗೆ ಕನ್ನಡಾಂಭೆಯ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಕಟ್ಟಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನ್ನಡ ಭಾಷೆ ಹಾಗೂ ಕರ್ನಾಟಕದ ಹಿರಿಮೆ, ಗರಿಮೆಯನ್ನು ಸಾರುವ ಕನ್ನಡ ಸಾಹಿತಿಗಳಾದ ಕುವೆಂಪು, ಬೇಂದ್ರೆ, ಕಂಬಾರರು ರಚಿಸಿರುವ ಹಾಡುಗಳನ್ನು ಹಾಡುತ್ತ ಜನಗಳಿಗೆ ಕನ್ನಡಾಭಿಮಾನವನ್ನು ಹೆಚ್ಚಿಸುವ ಪ್ರಯತ್ನ ಮಾಡಿದ್ದು ಎಲ್ಲರೂ ಮೆಚ್ಚುವಂತಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

