ಅಪ್ಪ-ಅವ್ವ ಸಂಸ್ಕೃತಿ ಬೆಳೆಯಲಿ: ನಾಡೋಜ ಅನ್ನದಾನ ಸ್ವಾಮೀಜಿ
ಮುಂಡರಗಿ: ಮಮ್ಮಿ-ಡ್ಯಾಡಿ ಸಂಸ್ಕೃತಿ ಹೋಗಿ ಅಪ್ಪ-ಅವ್ವ ಸಂಸ್ಕೃತಿ ನಮ್ಮಲ್ಲಿ ಬೆಳೆದು ಬಂದಾಗ ಮಾತ್ರ ಕನ್ನಡ ಭಾಷೆಗೆ ಮತ್ತಷ್ಟು ಮೆರಗು ಬರಲು ಸಾಧ್ಯ ಎಂದು ನಾಡೋಜ ಡಾ. ಅನ್ನದಾನ ಶ್ರೀಗಳು ಹೇಳಿದರು.
ಜ. ಅನ್ನದಾನೀಶ್ವರ ವಿದ್ಯಾ ಸಮಿತಿ ಮೈದಾನದಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ 58ನೇ ರಾಜ್ಯೋತ್ಸವದ ಸಾನ್ನಿಧ್ಯ ವಹಿಸಿ ಸ್ತಬ್ಧ ಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಉಪನ್ಯಾಸಕ ಪ್ರೊ. ಎ.ವೈ. ನವಲಗುಂದ ಮಾತನಾಡಿ, ರಾಜ್ಯೋತ್ಸವ ಬಂದಾಗ ಕನ್ನಡ ಭಾಷೆಯನ್ನು ನೆನಪು ಮಾಡಿಕೊಂಡರೆ ಸಾಲದು, ಕನ್ನಡ ನಮ್ಮ ನೆಲದ ಭಾಷೆ ಅದನ್ನು ಉಳಿಸಿ ಬೆಳೆಸುವ ಪ್ರಯತ್ನಗಳನ್ನು ಎಲ್ಲ ಕನ್ನಡಿಗರು ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಪ್ರತಿಯೊಬ್ಬರೂ ಕನ್ನಡ ಭಾಷೆ-ನೆಲ-ಜಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ನಮ್ಮ ಕನ್ನಡ ಭಾಷೆ ಕನ್ನಡಕ್ಕೆ ಯಾವ ಕುತ್ತು ಬರದಂತೆ ಎಚ್ಚರ ಮಹಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ ಎಂದು ಹೇಳಿದರು.
ತಾಲೂಕು ಉತ್ಸವ ಸಮಿತಿ ಅಧ್ಯಕ್ಷ ಮತ್ತು ತಹಸೀಲ್ದಾರ್ ಎಸ್.ಆರ್. ಶಿರಕೋಳ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಪಂ ಸದಸ್ಯೆ ಹೇಮಗಿರೀಶ ಹಾವಿನಾಳ ಮಾತನಾಡಿದರು. ಪುರಸಭೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಜನಾಂಗದ ವಿದ್ಯಾರ್ಥಿಗಳು, ಫಲಾನುಭವಿಗಳಿಗೆ ಶಾಸಕ ರಾಮಕೃಷ್ಣ ದೊಡ್ಡಮನಿ ಲ್ಯಾಪ್ಟಾಪ್ ಮತ್ತು ಹೊಲಿಗೆ ಯಂತ್ರಗಳನ್ನು ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

