ಗದಗ

ನರೇಗಲ್ಲ: ಅದ್ಧೂರಿ ರಾಜ್ಯೋತ್ಸವ

Published On :

ನರೇಗಲ್ಲ: ಕನ್ನಡ ಮಾಧ್ಯಮ ಶಾಲೆಯಲ್ಲಿ ಕನ್ನಡದ ಬಗ್ಗೆ, ನಾಡು ನುಡಿ, ಸಂಸ್ಕೃತಿ ಬಗ್ಗೆ ತಿಳಿಹೇಳುತ್ತಾರೆ. ನಮ್ಮ ಸಮಿತಿಯ ಆಂಗ್ಲಮಾಧ್ಯಮ ಶಾಲೆಯಲ್ಲಿ ಕನ್ನಡ ನಾಡು ನುಡಿಯ ರಕ್ಷಣೆ ಬಗ್ಗೆ ರೂಪಕಗಳ ಮೂಲಕ ತಿಳಿಹೇಳುತ್ತಾರೆ ಎಂದು ಸಾಹಿತಿ, ನ್ಯಾಯವಾದಿ ರವೀಂದ್ರನಾಥ ದೊಡ್ಡಮೇಟಿ ಶ್ಲಾಘಿಸಿದರು.
ಅವರು ಸ್ಥಳೀಯ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅನ್ನದಾನೀಶ್ವರ ಸೆಂಟ್ರಲ್ ಶಾಲೆಯ ಆಶ್ರಯದಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಂದಾನಪ್ಪ ದೊಡ್ಡಮೇಟಿ ಅವರ ವಂಶಸ್ಥ ಹಾಗೂ ಸಮಿತಿಯ ಆಡಳಿತ ಮಂಡಳಿಯ ಸದಸ್ಯ ರವೀಂದ್ರನಾಥ ದೊಡ್ಡಮೇಟಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ರೂಪಕಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆ ನರೇಗಲ್ಲನ ಅನ್ನದಾನೀಶ್ವರ ಮಠದಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಶಾಲೆಯ ಪ್ರಾಂಗಣಕ್ಕೆ ಆಗಮಿಸಿ ಮುಕ್ತಾಯಗೊಂಡಿತು.
ಮೆರವಣಿಗೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥ ಜಿ.ಪಿ. ಕುಲಕರ್ಣಿ, ಎಸ್.ಎ. ಪಪೂ ಕಾಲೇಜಿನ ಪ್ರಾಚಾರ್ಯ ವೈ.ಸಿ. ಪಾಟೀಲ, ಗದಗ ಜಿಲ್ಲಾ ಕಸಾಪ ಉಪಾಧ್ಯಕ್ಷ ಪ್ರೊ. ಸಿ.ಜಿ. ಹುಡೇದಗಡ್ಡಿ, ಗದಗ ಜಿಪಂ ಸದಸ್ಯ ಡಾ. ಆರ್.ಬಿ. ಬಸವರಡ್ಡೇರ, ಮುತ್ತು ಕಡಗದ ಇದ್ದರು. ಈ ಶಾಲಾ ಮಕ್ಕಳು ವೀರ ವನಿತೆಯರ ಹಾಗೂ ಸಂಗೊಳ್ಳಿ ರಾಯಣ್ಣನ ವೇಷ ಭೂಷಣಗಳು, ರೂಪಕಗಳನ್ನು ಪ್ರದರ್ಶಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.