ಗದಗ

ಗ್ರಾಮೀಣ ಪ್ರದೇಶದ ಶಿಕ್ಷಣಕ್ಕೆ ಆದ್ಯತೆ

Published On :

ರೋಣ: ಕ್ಷೇತ್ರದ ಸಮಗ್ರ ಅಭಿವೃದ್ಧಿ ಜತೆಗೆ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅದಕ್ಕೆ ಅಗತ್ಯವಿರುವ ಸೌಲಭ್ಯಗಳ ವ್ಯವಸ್ಥೆ ಕಲ್ಪಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯ 10 ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಚಿಕ್ಕಮಣ್ಣೂರು ಗ್ರಾಮದಲ್ಲಿ ರು. 75 ಲಕ್ಷ ವೆಚ್ಚದಲ್ಲಿ 10 ಕೊಠಡಿಗಳುಳ್ಳ ಸುಸಜ್ಜಿತ ಶಾಲೆ ಒದಗಿಸಲಾಗುವುದು. ಅದಕ್ಕೆ ಪೂರಕವಾದ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಸುಂದರವಾದ ಪರಿಸರದಲ್ಲಿ ನಿರ್ಮಾಣವಾಗುತ್ತಿದ್ದು, ಇದರ ಸದುಪಯೋಗವನ್ನು ಸುತ್ತಲಿನ ಗ್ರಾಮದ ಬಡ ಮಕ್ಕಳು ಪಡೆದುಕೊಳ್ಳಬೇಕು. ತಾಲೂಕಿನ ಹಿರೇಮಣ್ಣೂರು, ಬಾಚಲಾಪುರ, ಅರಹುಣಸಿ ಗ್ರಾಮದಲ್ಲಿ ಮಕ್ಕಳ ಸಂಖ್ಯೆ ಅಧಿಕವಾಗಿದೆ. ಆದರೆ, ಈವರೆಗೂ ಅಲ್ಲಿ 1ರಿಂದ 8ನೇ ತರಗತಿವರೆಗೆ ಮಾತ್ರ ಕಲಿಯಲು ಅವಕಾಶವಿದ್ದು, ಅಂತಹ ಶಾಲೆಗಳನ್ನು ಉನ್ನತೀಕರಣಗೊಳಿಸಲು ಸರ್ಕಾರ 10ನೇ ತರಗತಿವರೆಗೆ ಕಲಿಯಲು ಅವಕಾಶ ಕಲ್ಪಿಸಿದೆ. ಆ ನಿಟ್ಟಿನಲ್ಲಿ ಶಾಲೆಗೆ ಬೇಕಾದ ಕಟ್ಟಡಗಳನ್ನು ಒದಗಿಸುತ್ತದೆ ಎಂದರು.
ಬಿಇಒ ಡಿ.ಐ. ಅಸುಂಡಿ ಮಾತನಾಡಿದರು. ರೋಣದ ಗುಲಗಂಜಿ ಮಠದ ಗುರಪಾದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯ ಡಾ. ಆರ್.ಬಿ. ಬಸವರಡ್ಡೆರ, ತಾಪಂ ಸದಸ್ಯ ಧರ್ಮಣ್ಣ ಭೂಸಗೌಡ್ರ, ಗ್ರಾಪಂ ಅಧ್ಯಕ್ಷೆ ದೇವಕ್ಕ ಕುರಿಯವರ, ಗ್ರಾಪಂ ಸದಸ್ಯ ಪಾಲಾಕ್ಷಯ್ಯ ಹಿರೇಮಠ, ಶೇಖಪ್ಪ ಆಯನೂರ, ಬಾಲಚಂದ್ರಗೌಡ ಕೆಂಚನಗೌಡ್ರ, ವೀರಯ್ಯ ನೆಲ್ಲೂರಮಠ, ಶಿಕ್ಷಕ ನೀಲಗುಂದ, ಅಭಿಯಂತರ ಡಬ್ಲೂ.ಎ. ಕನ್ನುಬಾವಿ, ಮಲ್ಲಿಕಾರ್ಜುನ ಇನ್ನಿತರರು ಉಪಸ್ಥಿತರಿದ್ದರು. ಶಿಕ್ಷಕ ವಿ. ನಾಗರಾಜ ಸ್ವಾಗತಿಸಿದರು. ಈಶ್ವರ ಮುನವಳ್ಳಿ ನಿರೂಪಿಸಿದರು. ಮುಖ್ಯೋಪಾಧ್ಯಾಯ ಸಿ.ಪಿ. ಕಮ್ಮಾರ ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.