ಶಿಂಗಟಾಲೂರು ಗ್ರಾಪಂಗೆ ಮಹಾದೇವಿ ಅಧ್ಯಕ್ಷೆ
ಕನ್ನಡಪ್ರಭ ವಾರ್ತೆ, ಮುಂಡರಗಿ, ನ. 6
ತಾಲೂಕಿನ ಶಿಂಗಟಾಲೂರು ಗ್ರಾಪಂಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಹಾದೇವಿ ಪಾಟೀಲ ಅವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಎಂ. ನಾರಾಯಣ ಘೋಷಿಸಿದರು.
ಬುಧವಾರ ಶಿಂಗಟಾಲೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಮಹಾದೇವಿ ಪಾಟೀಲ ಅವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಮಹಾದೇವಿ ಅವರನ್ನೇ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಗಿದೆ.
ಈ ಸಂದರ್ಭ ಶಿಂಗಟಾಲೂರು ಗ್ರಾಪಂ ಮಾಜಿ ಅಧ್ಯಕ್ಷರಾದ ಅನಿತಾಕುಮಾರಿ ಸೀತಾರಾಮರಾಜು ಮಾತನಾಡಿ, ನಾನು ಈ ಹಿಂದೆ ಶಿಂಗಟಾಲೂರು ಗ್ರಾಪಂಗೆ ಅಧ್ಯಕ್ಷರಾಗಿ ಆಯ್ಕೆಯಾಗುವ ಪೂರ್ವದಲ್ಲಿ ಎಲ್ಲ ಹಿರಿಯರ ಹಾಗೂ ಸದಸ್ಯರಿಗೆ ಕೊಟ್ಟ ಮಾತಿನಂತೆ ನನ್ನ 10 ತಿಂಗಳ ಅಧ್ಯಕ್ಷ ಸ್ಥಾನದ ಅವಧಿ ಮುಗಿಸಿ ನಾನು ಮತ್ತೊಬ್ಬರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದರು.
ಬಿಜೆಪಿ ಮುಖಂಡ ಕರಬಸಪ್ಪ ಹಂಚಿನಾಳ ಮಾತನಾಡಿ, ಮುಂಬರುವ ದಿನಗಳಲ್ಲಿ ಎಲ್ಲ ಸದಸ್ಯರೊಂದಿಗೆ ಬೆರೆತು ಗ್ರಾಮ ಹಾಗೂ ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಜಿಪಂ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ತಮ್ಮ ಜಿಪಂ ಅನುದಾನದಲ್ಲಿ ಶಿಂಗಟಾಲೂರು ಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಅವಶ್ಯವಿರುವ ಕಾಮಗಾರಿಗಳನ್ನು ಮಂಜೂರು ಮಾಡಿಸುವುದಾಗಿ ತಿಳಿಸಿದರು.
ಸೀತಾರಾಮರಾಜು, ಈರಣ್ಣ ಶೆಟ್ಟರ್, ಫಕ್ಕೀರಡ್ಡಿ ನೀರಲಗಿ, ಜಿ.ಎ. ಹಿರೇಮಠ, ಅಣ್ಣಯ್ಯ ಪಾಟೀಲ, ಕೊಪಣ್ಣ ಕೊಪ್ಪಣ್ಣವರ, ಮೈಲಾರಪ್ಪ ಉದಂಡಿ, ದೇವಪ್ಪ ತಳವಾರ, ಈರಪ್ಪ ಶೆಟ್ಟರ್, ಹನುಮಪ್ಪ ಕಾತರಕಿ, ಶಿವಪ್ಪ ಬಂಡಿ, ಶಂಕರಗುರು ಬಿಳಿಮಗ್ಗದ, ಈರಪ್ಪ ಮುಂಡವಾಡ, ಪಾರವ್ವ ಚೌಟ್ನವರ, ಮಲ್ಲವ್ವ ಗೌಡ್ರ, ಶಂಕ್ರವ್ವ ಸೋಯನಹಳ್ಳಿ, ಕೊಟ್ರಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

