ಸ್ವಾತಂತ್ರ್ಯ ಹೋರಾಟಗಾರ ಗುರುಪಾದಪ್ಪ ಸಂತೋಜಿ ನಿಧನ
ರೋಣ: ಪಟ್ಟಣದ ನಿವಾಸಿ, ಸ್ವಾತಂತ್ರ್ಯ ಹೋರಾಟಗಾರ ಗುರುಪಾದಪ್ಪ ಸಂಗಪ್ಪ ಸಂತೋಜಿ ಅವರು ತಮ್ಮ 95ನೇ ವಯಸ್ಸಿನಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮೃತರಿಗೆ ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಇದ್ದರು. ಗುರುಪಾದಪ್ಪ ಸಂತೋಜಿ ಅವರ ಪಾರ್ಥಿವ ಶರೀರಕ್ಕೆ ರೋಣ ತಾಲೂಕು ಆಡಳಿತ ವತಿಯಿಂದ ತಹಸೀಲ್ದಾರ್ ಎ.ಜಿ. ಪಂಡಿತ ಅವರು ಮಾಲಾರ್ಪಣೆ ಮಾಡಿ ಅಂತಿಮ ನಮನ ಸಲ್ಲಿಸಿದರು.
ಸ್ವಾಂತಂತ್ರ್ಯಕ್ಕಾಗಿ ಹೋರಾಟ: ಸ್ವಾತಂತ್ರ್ಯ ಹೋರಾಟಗಾರ ಗುರುಪಾದಪ್ಪ ಸಂತೋಜಿ ಅವರು 1941 ರಲ್ಲಿ ಮಹಾತ್ಮಾ ಗಾಂಧೀಜಿಯವರೊಂದಿಗೆ ಸತ್ಯಾಗ್ರಹದಲ್ಲಿ ಭಾಗಿಯಾಗಿ ಜೈಲು, 1942ರ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗಿಯಾಗಿ ಹಿಂಡಲಗಾ ಜೈಲು ಮತ್ತು 1944ರಲ್ಲಿ ನವಲಗುಂದ ಜೈಲಿನಲ್ಲಿ ಹೀಗೆ 3 ಬಾರಿ ಜೈಲುವಾಸ ಅನುಭವಿಸಿದ್ದಾರೆ. 1934 ಮಾರ್ಚ್ 3 ರಂದು ಗಾಂಧೀಜಿಯವರು ತಾಲೂಕಿನ ಜಕ್ಕಲಿ ಗ್ರಾಮಕ್ಕೆ ಬಂದಾಗ ಅಂದಾನಪ್ಪ ದೊಡ್ಡಮೇಟಿಯವರೊಂದಿಗೆ ಇವರು ಮುಂದಾಳತ್ವ ವಹಿಸಿ ಗಾಂಧೀಜಿ ಪ್ರೀತಿಗೆ ಪಾತ್ರರಾಗಿದ್ದರು. ಹೀಗೆ ಹಲವಾರು ಹೋರಾಟದಲ್ಲಿ ಭಾಗಿಯಾದ ಕುರಿತು ನಮ್ಮ ತಂದೆ ಆಗಾಗ್ಗೆ ನೆನಪಿಸುತ್ತಿದ್ದರು ಎಂದು ಮೃತ ಸ್ವಾತ್ರ್ಯಂತ್ರ್ಯ ಹೋರಾಟಗಾರನ ಪುತ್ರ ಕಳಕಪ್ಪ ಸಂತೋಜಿ ತಿಳಿಸಿದರು.
ಗಣ್ಯರ ಸಂತಾಪ: ಮೃತರಿಗೆ ಶಾಸಕ ಜಿ.ಎಸ್. ಪಾಟೀಲ, ಮಾಜಿ ಸಚಿವ ಕಳಕಪ್ಪ ಬಂಡಿ, ಸಿ.ಸಿ. ಪಾಟೀಲ, ಜ್ಞಾನದೇವ ದೊಡ್ಡಮೇಟಿ, ಶ್ರೀಶೈಲಪ್ಪ ಬಿದರೂರ, ಮಾಜಿ ಸಂಸದ ಆರ್.ಎಸ್. ಪಾಟೀಲ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

