ಶಾದಿಭಾಗ್ಯ ಯೋಜನೆ ಎಲ್ಲ ಸಮುದಾಯಕ್ಕೂ ವಿಸ್ತರಿಸಿ
ಮುಂಡರಗಿ: ಸರ್ಕಾರ ಜಾರಿಗೆ ತಂದಿರುವ ಶಾದಿಭಾಗ್ಯ ಯೋಜನೆಯನ್ನು ಎಲ್ಲ ಸಮುದಾಯದ ಹೆಣ್ಣುಮಕ್ಕಳಿಗೂ ವಿಸ್ತರಿಸುವಂತೆ ಒತ್ತಾಯಿಸಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ಬುಧವಾರ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯು ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕಿಗೆ ಚ್ಯುತಿ ತರುವಂತಹ ಯೋಜನೆ ಇದಾಗಿದ್ದು, ಶಾದಿ ಭಾಗ್ಯ ಯೋಜನೆಯನ್ನು ಕಾನೂನು ಬಾಹಿರವಾಗಿ ಜಾರಿಗೊಳಿಸಿದ್ದು, ಮರು ಪರಿಶೀಲನೆ ಮಾಡಿ ಎಲ್ಲ ಸಮುದಾಯದವರಿಗೆ ದೊರೆಯುವಂತೆ ವಿಸ್ತರಿಸಬೇಕು.
ಇಲ್ಲದಿದ್ದರೆ ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಮುಂಬರುವ ದಿನಗಳಲ್ಲಿ ರಾಜ್ಯ ಭವನದ ಮುಂದೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟ ವೇದಿಕೆ ಸಂಚಾಲಕ ಬಸವರಾಜ ನವಲಗುಂದ, ಎಸ್.ಎಚ್. ಭಜಂತ್ರಿ, ಸಹದೇವಪ್ಪ ಭಜಂತ್ರಿ, ಈಶಪ್ಪ ಗೋಡಿ, ಶರಣಪ್ಪ ಕುಂಬಾರ, ಅಂದಾನಗೌಡ ಪಾಟೀಲ, ಅಂದಾನಗೌಡ ಕುಲಕರ್ಣಿ, ಚಂದ್ರಪ್ಪ ಚಿಕ್ಕನ್ನವರ, ಕೃಷ್ಣಪ್ಪ ಕಂಚಗಾರ ಸಾರ್ವಜನಿಕ ಹೋರಾಟ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

