ಮರಳಿ ಶಾಲೆಗೆ ಕರೆತನ್ನಿ ಯೋಜನೆ ಯಶಸ್ಸಿನತ್ತ
ಗಜೇಂದ್ರಗಡ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗಳತ್ತ ಕರೆತನ್ನಿ ಎನ್ನುವ ಶಿಕ್ಷಣ ಇಲಾಖೆಯ ವಿನೂತನ ಸಮೀಕ್ಷಾ ಕಾರ್ಯಕ್ಕೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಯ ಕನಸು ಸಾಕಾರಗೊಳ್ಳುವುದರಲ್ಲಿ ಸಂದೇಹವೇ ಇಲ್ಲ ಎಂದು ಪ್ರಧಾನ ಗುರುಮಾತೆ ಬಿ.ಟಿ. ಹೊಸಮನಿ ಹೇಳಿದರು.
ಅವರು ಸಮೀಪದ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಿಆರ್‌ಸಿ ತಂಡ ಭೇಟಿ ನೀಡಿದ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿನ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ನೀಡಿದರು. ದೇಶದ ಪ್ರತಿ ಪ್ರಜೆಯು ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ಸದುದ್ದೇಶದಿಂದ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಮೂಲಕ ಶಿಕ್ಷಣ ಇಲಾಖೆಗೆ ಹಲವಾರು ಯೋಜನೆಗಳನ್ನು ರೂಪಿಸಿ, ಅದರ ಅಡಿಯಲ್ಲಿ ಸರ್ವರನ್ನು ಸಾಕ್ಷರರನ್ನಾಗಿಸುವತ್ತ ಯಶಸ್ವಿಯ ದಾಪುಗಾಲು ಇಡುತ್ತಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು. ಸಿಆರ್‌ಸಿಯ ಎಸ್.ವೈ.ದಾಸರ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿನ ಪಾಲಕರು ತಮ್ಮ ಮಕ್ಕಳಿಗೆ ಕೃಷಿ ಸೇರಿದಂತೆ ಇನ್ನಿತರ ಚಟುವಟಿಕೆಯಲ್ಲಿ ತೊಡಗಿಸುವ ಬದಲು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡಿಸುವತ್ತ ಚಿಂತಿಸುವ ಅಗತ್ಯವಿದೆ ಎಂದರು. ಸಮೀಕ್ಷೆ ವೀಕ್ಷಕರಾಗಿ ಬಸವರಾಜ ತುಮ್ಮರಗುದ್ದಿ, ಸುರೇಶ ಹಡಪದ, ಬಿ.ಎಸ್. ಹುಂಡೇಕಾರ, ಶಿವರುದ್ರಮ್ಮ, ಎಸ್.ಎಫ್. ಉಪ್ಪಾರ, ಎಂ.ಸಿ. ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

